ಸೋಲಿನ ಭಯಕ್ಕೆ ಸಿಬಿಐ ರೈಡ್ : ಎಂ ಬಿ ಪಾಟೀಲ್

ವಿಜಯಪುರ:

    ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸುವ ಮೂಲಕ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ನಾಯಕರನ್ನು ಧೃತಿಗೆಡಿಸುವ ಹುನ್ನಾರ ಈಡೇರದು ಎಂದು ಮಾಜಿ ಸಚಿವ-ಕಾಂಗ್ರೆಸ್ ನಾಯಕ ಡಾ.ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.

    ಬುಧವಾರ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಸದ‌ ಡಿ.ಕೆ.ಸುರೇಶ ಮನೆ, ಕಛೇರಿ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತ ಹಾಗೂ ಉಪ ಚುನಾವಣೆಯಲ್ಲಿ ಸೋಲುವ ಭೀತಿ, ಹತಾಶೆಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಡಸಿದ ಹತಾಶೆಯ ದಾಳಿ ಎಂದು ಕುಟುಕಿದರು.

     ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಸಂರಕ್ಷಣೆ ಮಾಡಲು ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ನಲ್ಲಿ‌ ಇರಿಸಿದ್ದರಿಂದ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಲಾಗಿತ್ತು.

     ಇದೀಗ ರಾಜ್ಯದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಸಂದರ್ಭದಲ್ಲಿ ಸಿಬಿಐ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ನಾಯಕರ ಆತ್ಮಸ್ಥೈರ್ಯ ಕುಗ್ಗಿಸುವ ದುಸ್ಸಾಹಸಕ್ಕೆ ಮುಂದಾಗಿದೆ. ಆದರೆ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಚಿತವಾಗಿಯೇ ಸಿಬಿಐ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ಪಕ್ಷದ‌ ಅಭ್ಯರ್ಥಿಗಳು ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ವಿಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

     ಇಷ್ಟಕ್ಕೂ ಕಾಂಗ್ರೆಸ್ ನಾಯಕರ ಮನೆ ಮೇಲೆ ಮಾತ್ರ ದಾಳಿ ನಡೆಸುವ ಕೇಂದ್ರದ ಅಧೀನದಲ್ಲಿ ಇರುವ ತನಿಖಾ ಸಂಸ್ಥೆಗಳ ಅಧಿಕಾರಿಗಳ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap