ಮೈಸೂರು :
ಡಿಕೆ ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ಮಾಡಿದ್ದು ರಾಜಕೀಯ ದುರುದ್ದೇಶದಿಂದಲೇ ಹೊರತು ಬೇರಾವುದೇ ಪ್ರಕರಣಗಳ ಹಿನ್ನಲೆಯಲ್ಲಿ ಅಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಮಾತ್ರ ದಾಳಿ ಮಾಡುತ್ತಿರುವ ಸಿಬಿಐ ಯಾಕೆ ಬಿಜೆಪಿಯವರ ಮೇಲೆ ದಾಳಿ ಮಾಡುತ್ತಿಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮಾತ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.. ಅಕ್ರಮದಲ್ಲಿ ತೊಡಗಿದ್ದಾರೆ ಎಂಬುದಾಗಿ ಸಿಬಿಐ ದಾಳಿ ನಡೆಸುತ್ತಿದೆಯಲ್ಲಾ.. ಯಾಕೆ ಬಿಜೆಪಿಯವರು ಭ್ರಷ್ಟಾಚಾ, ಅಕ್ರಮ ಹಣ ಸಂಪಾದನೆಯನ್ನೇ ಮಾಡ್ತಾ ಇಲ್ವಾ ಎಂಬುದಾಗಿ ಕಿಡಿಕಾರಿದರು.
ಬಿಜೆಪಿಯವರು ಹೇಳೋದು ಬರೀ ವೇದಾಂತ ಅಷ್ಟೇ.. ಉಪ ಚುನಾವಣೆಯ ಸಂದರ್ಭದಲ್ಲಿಯೇ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿ ಮಾಡಿದ್ದು ರಾಜಕೀಯ ದುರುದ್ದೇಶದಿಂದಲೇ ಆಗಿದೆ. ಉಪ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ನಾಯಕರನ್ನು ಯಾಕೆ ಟಾರ್ಗೆಟ್ ಮಾಡಬೇಕು ಎಂಬುದಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ