ಬೆಂಗಳೂರು
ಗುತ್ತಿಗೆದಾರರೊಬ್ಬರಿಂದ 14 ಲಕ್ಷ ರೂಗಳನ್ನು ಪಡೆಯಲೆತ್ನಿಸಿದ ಆದಾಯ ತೆರಿಗೆ ಅಧಿಕಾರಿಯೊಬ್ಬರು ಸಿಬಿಐ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕಳೆದ ಮಾ.6ರಂದು ಬೆಂಗಳೂರಿನ ಗುತ್ತಿಗೆದಾರ ಶ್ರೀನಿವಾಸ್ ಎಂಬುವರ ಮನೆಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬಗ್ಗೆ ಪ್ರಕ್ರಿಯೆಗಳು ಮುಂದುವರೆದಿದ್ದವು.
ಈ ನಡುವೆ ಐಟಿ ಅಧಿಕಾರಿ ನಾಗೇಶ್ ಎಂಬುವರು ಗುತ್ತಿಗೆದಾರ ಶ್ರೀನಿವಾಸ್ ಅವರನ್ನು ಪ್ರಕರಣದಿಂದ ಖುಲಾಸೆ ಮಾಡಲು 40 ಲಕ್ಷರೂಗಳಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಐಟಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟ ಕುರಿತು ಗುತ್ತಿಗೆ ದಾರ ಶ್ರೀನಿವಾಸ್ ಸ್ನೇಹಿತನ ಸಲಹೆ ಮೇರೆಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಮಾತುಕತೆ ನಡೆದು ಬುಧವಾರ ಬೆಂಗಳೂರಿನ ಜಯನಗರದ ಕೆಫೆವೊಂದರ ಬಳಿ ನಾಗೇಶ್ ಅವರು ಹಣ ಸ್ವೀಕರಿಸಲು ಪ್ರಯತ್ನಿಸುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ತನ್ನ ವಶಕ್ಕೆ ಪಡೆದಿದ್ದಾರೆ. ನಾಗೇಶ್‍ರನ್ನ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಸಿಬಿಐ ಪೊಲೀಸರ ಮಾಹಿತಿ ಅನ್ವಯ ಮತ್ತೊಬ್ಬ ಐಟಿ ಅಧಿಕಾರಿ ಕೂಡ ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಆತ ಬಂದಿಲ್ಲ ಎನ್ನಲಾಗಿದೆ. ಈ ಬಗ್ಗೆಯೂ ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.