ಬೆಂಗಳೂರು
ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಬೆಂಗಳೂರು, ದೆಹಲಿಯಲ್ಲಿರುವ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಕಚೇರಿಗಳ ಮೇಲೆ ಶುಕ್ರವಾರ ದಾಳಿ ನಡೆಸಿದೆ.ಸಿಬಿಐ ದಾಳಿಗಳ ಕುರಿತು ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಅಧಿಕಾರಿಗಳು ಮಾತನಾಡಿ, ಆರು ಮಂದಿ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ 8.30ರಲ್ಲಿ ಬೆಂಗಳೂರು ಅಮ್ನೆಸ್ಟಿ ಕಚೇರಿ ಮೇಲೆ ದಾಳಿ ನಡೆಸಿ ಸಂಜೆ 5 ಗಂಟೆಯವರೆಗೂ ಶೋಧನೆ ಮುಂದುವರೆದಿದ್ದಾರೆ ಎಂದು ತಿಳಿಸಿದ್ದಾರೆ.
“ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ನಾವು ಪ್ರತಿ ಬಾರಿ ಮಾತನಾಡಿದಾಗಲೂ ನಮ್ಮ ಮೇಲೆ ಈ ರೀತಿಯ ಬೆದರಿಕೆ, ಕಿರುಕುಳಗಳಿಗೆ ಒಳಗಾಗುತ್ತಿದ್ದೇವೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ತಮ್ಮ ಸಂಸ್ಥೆ ಭಾರತೀಯ ಮತ್ತು ಅಂತರರಾಷ್ಟ್ರೀಯ ಕಾನೂನಿನ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆ ಹೇಳಿದೆ. ಕಳೆದ ವರ್ಷ ಕೂಡ, ವಿದೇಶಿ ವಿನಿಮಯ ಉಲ್ಲಂಘನೆ (ಫೆರಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕಚೇರಿಯ ಮೇಲೆ ದಾಳಿ ನಡೆಸಿ ಶೋಧನೆ ನಡೆಸಿತ್ತು. 2010 ರಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
