ದುಗ್ಗಮ್ಮನ ಪ್ರಸಾದ ನಿಲಯದಲ್ಲಿ ಸಿ.ಸಿ. ಕ್ಯಾಮೆರಾ

ದಾವಣಗೆರೆ :

         ನಗರದೇವತೆ ಶ್ರೀದುರ್ಗಾಂಬಿಕಾ ದೇವಸ್ಥಾನದ ವತಿಯಿಂದ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಹಾಗೂ ವಿಶೇಷ ದಿನಗಳಲ್ಲಿ ಅನ್ನದಾಸೋಹ ನಡೆಯಲಿದ್ದು, ದೇವಸ್ಥಾನದ ಪ್ರಸಾದ ನಿಲಯದಲ್ಲಿ ಸಿ.ಸಿ.ಕ್ಯಾಮೆರಾ ಅಳವಡಿಸುವುದರ ಜೊತೆಗೆ ಅಡುಗೆ ಭಟ್ಟರು ಮತ್ತು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಬಿಟ್ಟು ಯಾರನ್ನು ಪ್ರವೇಶಿಸದಂತೆ ನಿಷೇಧಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

           ಭಾನುವಾರ ಬೆಳಿಗ್ಗೆ ದೇವಸ್ಥಾನದ ಆವರಣದಲ್ಲಿ ಶಾಸಕರು, ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

           ಸಭೆಯಲ್ಲಿ ದೇವಸ್ಥಾನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿವಿಧ ತೀರ್ಮಾನ ಕೈಗೊಳ್ಳುವ ವೇಳೆ ಶಾಮನೂರು ಶಿವಶಂಕರಪ್ಪನವರು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಪ್ರಕರಣವನ್ನು ಪ್ರಸ್ತಾಪಿಸಿ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಪ್ರಸಾದ ನಿಲಯದಲ್ಲಿ ಸಿ.ಸಿ.ಕ್ಯಾಮೆರಾ ಅಳವಡಿಸಿ, ಹೊರಗಿನವರಿಗೆ ಅಡುಗೆ ಕೋಣೆ ನಿರ್ಬಂಧ ವಿಧಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳೋಣ ಎಂದು ಹೇಳಿದಾಗ ಪ್ರತಿಯೊಬ್ಬರು ಒಪ್ಪಿಗೆ ಸೂಚಿಸಿದರು.ದೇವಸ್ಥಾನ ಸಮಿತಿಯ ಗೌಡ್ರು ಚನ್ನಬಸಪ್ಪನವರು ಸಭೆಯ ನಡಾವಳಿಯನ್ನು ಓದಿ ದಾಖಲಿಸಿದರು.

          ಈ ಸಭೆಯಲ್ಲಿ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರಾದ ಚನ್ನಗಿರಿ ವಿರೂಪಾಕ್ಷಪ್ಪ, ಮಾಜಿ ಅಧ್ಯಕ್ಷರಾದ ಯಜಮಾನ್ ಮೋತಿವೀರಣ್ಣ, ಖಜಾಂಚಿ ಅಥಣಿ ವೀರಣ್ಣ, ಶಿಂಧೆ ಬಾಬುರಾವ್, ಜೆ.ಕೆ.ಕೊಟ್ರಬಸಪ್ಪ, ಪಿಸಾಳೆ ಸತ್ಯನಾರಾಯಣ, ಹನುಮಂತರಾವ್ ಸಾವಂತ್, ಬಿ.ಹೆಚ್.ವೀರಭದ್ರಪ್ಪ, ಉಮೇಶ್ ಸಾಳಂಕಿ, ಬಿ.ಕೆ.ರಾಮಕೃಷ್ಣ, ಸೊಪ್ಪಿನ ಗುರುರಾಜ್, ಹನುಮಂತರಾವ್ ಜಾಧವ್ ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link