ಬೆಂಗಳೂರು
ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ನ ಮ್ಯಾಚ್ ಫಿಕ್ಸಿಂಗ್ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದ ಸಂಬಂಧ ಅಂತಾರಾಷ್ಟ್ರೀಯ ಬುಕ್ಕಿ ಜತಿನ್‌ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ.
ನೆದರ್‌ಲ್ಯಾಂಡ್‌ನಲ್ಲಿ ತಲೆಮರೆಸಿಕೊಂಡಿದ್ದ ದೆಹಲಿಯ ಜತಿನ್ (32) ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಬುಕ್ಕಿ ಜತಿನ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಖಚಿತ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು, ಆತನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವುದರಿಂದ ಜತಿನ್‌ನನ್ನು ಬಂಧಿಸದೇ ವಿಚಾರಣೆ ನಡೆಸಲಾಗಿದೆ ಆರೋಪಿಯು ಕೆಪಿಎಲ್ ಅಲ್ಲದೆ, ಹಲವು ಕ್ರಿಕೆಟ್ ಪಂದ್ಯಗಳ ಸೋಲು – ಗೆಲುವಿನ ಸಂಬಂಧ ಬಿಟ್ಟಿಂಗ್ ಕಟ್ಟಿಸಿಕೊಂಡಿದ್ದಲ್ಲದೆ, ಮ್ಯಾಚ್ ಫಿಕ್ಸಿಂಗ್‌ನಲ್ಲೂ ಭಾಗಿಯಾಗಿದ್ದು, ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.
ಕೆಪಿಎಲ್‌ನಲ್ಲಿ ನಡೆದಿರುವ ಮ್ಯಾಚ್ ಫಿಕ್ಸಿಂಗ್ ಸಂಬಂಧ ಜತಿನ್, ಹಲವು ಮಾಹಿತಿಗಳನ್ನು ನೀಡಿದ್ದಾನೆ. ಇಲ್ಲಿಯವರೆಗೆ ಬಂಧಿಸಿರುವ ಆರೋಪಿಗಳ ಜೊತೆಗೂ ಸಂಪರ್ಕ ಹೊಂದಿರುವುದು ತನಿಖೆಯಲ್ಲಿ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.ಡಿಸಿಪಿ ಕುಲ್‌ದೀಪ್ ಕುಮಾರ್ ಜೈನ್ ಅವರ ನೇತೃತ್ವದಲ್ಲಿ ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆಯ ನಂತರ, ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
