ಬೆಂಗಳೂರು:
ಕರ್ನಾಟಕದಲ್ಲಿ ತೀವ್ರ ಸಂಚಲನ ಮೂಡಿಸಿರುವ ಡ್ರಗ್ಸ್ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಇತ್ತ ಸಿಸಿಬಿ ಅಧಿಕಾರಿಗಳು ನಿನ್ನೆ ತಡರಾತ್ರಿ ನಗರದ ಪ್ರತಿಷ್ಠಿತ ಪಬ್ ಗಳ ಮೇಲೆ ದಾಳಿ ಮಾಡಿದ್ದಾರೆ.
ಕಳೆದ ರಾತ್ರಿ ನಗರದ ಪ್ರತಿಷ್ಠಿತ ಬಾರ್ ಹಾಗೂ ಪಬ್ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ನಿನ್ನೆ ತಡರಾತ್ರಿ, ಕ್ಲೌಡ್ ನೈನ್, ಸ್ಕೈ ಬಾರ್, ಸ್ಟರ್ಲಿಂಗ್ ಮ್ಯಾಕ್ ಹೋಟೆಲ್, ಯುಬಿ ಸಿಟಿ ಸೇರಿದಂತೆ ಐದು ಕಡೆ ದಾಳಿ ನಡೆಸಲಾಗಿದೆ. ಕಡಿಮೆ ಬೆಲೆಯ ಆಫರ್ ನೀಡಿ ಗ್ರಾಹಕರನ್ನು ಸೆಳೆಯುತ್ತಿರುವ ಶಂಕೆ ಮೇರೆಗೆ, ಮತ್ತು ಅಕ್ರಮ ಚಟುವಟಿಕೆಗಳು ನಡೆಯುತ್ತಿರಬಹುದು ಎಂಬ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದರು.