ಬೆಂಗಳೂರು
ಲಾಕ್ ಡೌನ್ ಜಾರಿಯಲ್ಲಿದ್ದರೂ ಅಕ್ರಮವಾಗಿ ಮದ್ಯ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದಾರೆ.ರಾಮಮೂರ್ತಿ ನಗರದಲ್ಲಿ ದಾಳಿ ನಡೆಸಿ, 1 ಸಾವಿರ ಟೆಟ್ರಾ ಪ್ಯಾಕ್ ವಿಸ್ಕಿ ಹಾಗೂ ಕೆಂಗೇರಿಯಲ್ಲಿ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ
ಇದಲ್ಲದೆ ಆರ್ಎಂಸಿ ಯಾರ್ಡ್ನಲ್ಲಿ ಪಿಎಂಹೆಚ್ ಟ್ರೇಡರ್ಸ್ ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, 1.96 ಲಕ್ಷ ರೂ ಮೌಲ್ಯದ 560 ಬಂಡಲ್ ನ 11 ಸಾವಿರದ 200 ಪ್ಯಾಕ್ಸ್ ಬೀಡಿಗಳನ್ನ ವಶಪಡಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಇನ್ನು,ಕೊಡಿಗೆಹಳ್ಳಿಯ ಲಿಕ್ಕರ್ ಶಾಪ್ ಮೇಲೂ ಸಿಸಿಬಿ ಪೊಲೀಸರು ದಾಳಿ ನಡೆಸಿ, 17 ಲೀಟರ್ ನ 96 ಪೌಚಸ್ ಗಳ 180 ಎಂಎಲ್ ಲಿಕ್ಕರ್ ಜಪ್ತಿ ಮಾಡಿ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ