ತುಮಕೂರು:
ಕೊರೊನಾ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಕರೆ ನೀಡಿದ್ದು, ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ಪದಾಧಿಕಾರಿಗಳು ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ರಾಜ್ಯಾಧ್ಯಕ್ಷ ನಗುತ ರಂಗನಾಥ್ ಕರೆ ನೀಡಿದ್ದಾರೆ.
ಪರಮೇಶ್ವರ್ ಅವರ ಹುಟ್ಟುಹಬ್ಬದ ಅಂಗವಾಗಿ ವೃದ್ಧಾಶ್ರಮದಲ್ಲಿ ವೃದ್ಧರಿಗೆ ಊಟದ ವ್ಯವಸ್ಥೆ, ರೋಗಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ರಕ್ತದಾನದ ಶಿಬಿರ, ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ರಂಗನಾಥ್ ಮನವಿ ಮಾಡಿದ್ದು, ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯವಸ್ತವಾಗಿದೆ. ಯುವ ಸೈನ್ಯದ ಕಾರ್ಯಕರ್ತರು ಜನರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗುವ ಮೂಲಕ ಪರಮೇಶ್ವರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಮುಂದಾಗಬೇಕಿದೆ ಎಂದವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ