ಬೆಂಗಳೂರು 
ಉತ್ತರ ಕರ್ನಾಟಕ ಭಾಗದ ಜನರ ದಶಕಗಳ ಕನಸಾಗಿರುವ ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಯೋಜನೆ ಅನುಷ್ಠಾನಕ್ಕೆ ನೀಡಿದ್ದ ಒಪ್ಪಿಗೆಯನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ತಡೆ ಹಿಡಿದಿದೆ. ಗೋವಾ ರಾಜ್ಯದ ಒತ್ತಾಯದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕದ ಸುಮಾರು 814 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಮೊದಲು ಒಪ್ಪಿಗೆ ನೀಡಿತ್ತು. ಈಗ ಮಹದಾಯಿ ಯೋಜನೆಗೆ ನೀಡಿದ್ದ ಒಪ್ಪಿಗೆಗೆ ತಡೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








