ಬೆಳಗಾವಿ:
ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿರುವ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬಂಧ ಗೋವಾ ಸರ್ಕಾರ ಸಲ್ಲಿಕೆ ಮಾಡಿದ್ದ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ತಾನು ಸಲ್ಲಿಕೆ ಮಾಡಿರುವ ತಕಾರಾರು ಅರ್ಜಿಯ ಇತ್ಯರ್ಥವಾಗುವರೆಗೂ ಯೋಜನೆಗೆ ಅನುಮೋದನೆ ನೀಡದಂತೆ ಗೋವಾ ಸರ್ಕಾರ ಸಲ್ಲಿಕೆ ಮಾಡಿದ್ದ ಮನವಿಯನ್ನುಕೇಂದ್ರದ ಜಲಶಕ್ತಿ ಸಚಿವಾಲಯ ತಳ್ಳಿ ಹಾಕಿದೆ.
ಇನ್ನು ಅತ್ತ ಕೇಂದ್ರ ಸರ್ಕಾರ ತನ್ನ ಮನವಿಯನ್ನು ತಿರಸ್ಕರಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಗೋವಾ ವಿರೋಧ ಪಕ್ಷದ ನಾಯಕರು ಕೇಂದ್ರ ಸರ್ಕಾರ ಗೋವಾ ಸರ್ಕಾರದ ಬೆನ್ನಿಗೆ ಚೂರಿ ಇರಿದಿದೆ. ನಮ್ಮ ನಂಬಿಕೆಗಳಿಗೆ ದ್ರೋಹ ಮಾಡಿದ್ದು, ಕೂಡಲೇ ಸಿಎಂ ಪ್ರಮೋದ್ ಸಾವಂತ್ ಸರ್ಕಾರ ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ದಾಖಲಿಸಬೇಕು. ಅಲ್ಲದೆ ಯಾವುದೇ ಕಾರಣಕ್ಕೂ ಮಹದಾಯಿ ನದಿ ನೀರಿನ ಹರಿವಿನ ಮಾರ್ಗವನ್ನು ಬದಲಾವಣೆ ಮಾಡಬಾರದು ಎಂದು ಆಗ್ರಹಿಬೇಕು ಎಂದು ಹೇಳಿದ್ದಾರೆ. ಅಲ್ಲದೆ ಸಿಎಂ ಸಾವಂತ್ ವಿರುದ್ಧವೂ ಕಿಡಿಕಾರಿರುವ ವಿಪಕ್ಷ ನಾಯಕರು ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಸಾವಂತ್ ಸರ್ಕಾರ ಯಾವುದೇ ರೀತಿಯ ಪ್ರಮುಖ ನಡೆ ಅನುಸರಿಸುತ್ತಿಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿನೋದ್ ಪಾಲೇಕರ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ