ಬೆಂಗಳೂರು
ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ರಾಜ್ಯಗಳಿಗೂ ಸಮಾನ ಅವಕಾಶ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಕನ್ನಡಿಗರಿಗೆ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡುವುದಾಗಿ ನೀಡಿದ ಭರವಸೆ ಹುಸಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್) ಗುರುವಾರ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ 953 ಹುದ್ದೆಗಳು ಖಾಲಿಯಿದ್ದು, ಪರೀಕ್ಷೆಗಳು ಪೂರ್ವಭಾವಿ ಮತ್ತು ಮುಖ್ಯ ಎಂಬ ಎರಡು ಹಂತದಲ್ಲಿದ್ದು ಪರೀಕ್ಷೆಗಳನ್ನು ನಡೆಸಲಾಗುತ್ತದೆ .
ಇದರಲ್ಲಿ ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದಿರಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಭಾಷೆ ತಿಳಿದಿರುವುದನ್ನು ದೃಢಪಡಿಸುವುದಕ್ಕೆ ಯಾವುದೇ ಮಾನದಂಡಗಳು ನಿಗದಿಯಾಗಿಲ್ಲ.ಭಾಷಾ ಆಯ್ಕೆ ಮಾಡುವಾಗ ಬರುವ ಆಯ್ಕೆಗಳಲ್ಲಿ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಮಾತ್ರ ನೀಡಲಾಗಿದೆ ಮತ್ತು ಈ ಮೂಲಕ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಹೇಳಿದ್ದ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದ ಭರವಸೆ ಹುಸಿಯಾಗಿದೆ. ಇದರ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ