ಈರುಳ್ಳಿ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಬೆಂಗಳೂರು

    ಕೋಳಿ(ಚಿಕನ್)ಬೆಲೆಗಿಂತ ಈರುಳ್ಳಿ ಬೆಲೆ ಹೆಚ್ಚಾಗಿರುವುದನ್ನು ನಿಯಂತ್ರಣ ಮಾಡಲು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.ಈರುಳ್ಳಿ ಪ್ರತಿ ಕೆಜಿಗೆ 150 ರೂ. ದಾಟಿದೆ.

       ಇದು ದೇಶದ ಕೆಟ್ಟ ಆರ್ಥಿಕ ಪರಿಸ್ಥಿತಿಗೆ ಇದು ತಾಜಾ ಉದಾಹರಣೆಯಾಗಿದೆ.ದೇಶದಲ್ಲಿ ನೋಟು ಅಮಾನ್ಯದ ಬಳಿಕ ಎಲ್ಲ ಕ್ಷೇತ್ರಗಳಲ್ಲೂ ಹಾಳಾಗುತ್ತಿದೆ. ಇನ್ನಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಬೆಲೆ ಏರಿಕೆಗೆ ಕಡಿವಾಣ ಹಾಕಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

    ಪಕ್ಷದ ಪಾಲಿಕೆ ಸದಸ್ಯ ವಸಂತ್‌ಕುಮಾರ್ ಅವರನ್ನು ಸೇರ್ಪಡೆ ಮಾಡುವಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗಳ ಕೈವಾಡವಿದೆ ಎಂದು ಆರೋಪಿಸಿದರು.ವಿವಿಧ ಕ್ಷೇತ್ರಗಳಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಆಪರೇಷನ್ ಕಮಲದ ಅಡ್ಡದಾರಿ ಹಿಡಿದಿದೆ. ಇಂತಹ ಹಳೇ ಚಾಳಿಯನ್ನು ಬಿಟ್ಟುಬಿಡಿ. ಅದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು. ಉಪಚುನಾವಣೆಯಲ್ಲಿ ಜನರು ಕೊಡುವ ಆದೇಶಕ್ಕೆ ಬದ್ಧರಾಗಿ ಎಂದು ಅವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ