ಬೆಂಗಳೂರು
ಜಿಎಸ್ ಟಿ ಪರಿಹಾರ ನಿರಾಕರಿಸುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ದೊ ಡ್ಡ ದ್ರೋಹ ಎಸಗಿದೆ.ಕೊರೊನಾ ರೋಗದಿಂದಾಗಿ ದೇಶದ ಎಲ್ಲಾ ರಾಜ್ಯಗಳು ಆರ್ಥಿಕ ದುಸ್ಥಿತಿಯನ್ನು ಎದುರಿ ಸುತ್ತಿವೆ.ಸರ್ಕಾರಿ ನೌಕರರಿಗೆ ಸಂಬಳ ನೀಡುವುದು ಕಷ್ಟವೆನ್ನುವ ಪರಿಸ್ಥಿತಿ ಇದೆ ಎಂದು ಅವರು ಕೇಂದ್ರ ಸರ್ಕಾರದ ನೀತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಿಎಸ್ ಟಿ ಜಾರಿಗೆ ತರುವ ಸಂದರ್ಭದಲ್ಲಿ ಜಿಎಸ್ ಟಿ ಕೌನ್ಸಿಲ್ ನಲ್ಲಿ ಒಂದು ಒಪ್ಪಂದವಾಗಿತ್ತು ಅದರಂತೆ ಜಿಎಸ್ ಟಿ ಸಂಗ್ರಹದಲ್ಲಿ ನಷ್ಟವಾದರೆ ಅದನ್ನು ಕೇಂದ್ರ ಸರ್ಕಾರ ಭರಿಸಿಕೊಡಬೇಕು ಹಾಗೂ ಮುಂದಿನ 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದಿತ್ತು. ಒಪ್ಪಂದದ ಪ್ರಕಾರ ನಡೆದಕೊಳ್ಳಬೇಕಾಗಿರುವುದು ನರೇಂದ್ರ ಮೋದಿಯವರ ಸರ್ಕಾರದ ಜವಾಬ್ದಾರಿ.14% ಜಿಎಸ್ ಟಿ ಖೋತಾ ಆಗಲಿದೆ,ಅದನ್ನು ಮುಂದಿನ 5 ವರ್ಷಗಳವರೆಗೆ ತುಂಬಿಕೊ ಡಬೇಕು ಎಂದು ಒಪ್ಪಂದವಾಗಿತ್ತು.ಆಗ ನಮ್ಮ ಸರ್ಕಾರ ಆಡಳಿತದಲ್ಲಿತ್ತು.ಆ ನಷ್ಟವನ್ನು ಪರಿಹಾರದ ರೂಪದ ಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ತುಂಬಿಕೊಡಬೇಕಾಗಿತ್ತು ಎಂದು ಅವರು ತಿಳಿಸಿದರು.
ಈಗ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಕೊರೊನಾ ತೀವ್ರವಾಗಿ ವ್ಯಾಪಿಸಿದೆ. ಇದನ್ನು ಯಾರೂ ಊಹಿಸಿರಲಿಲ್ಲ.ಇದು ದೇವರ ಆಟ,ಸುಮಾರು 3 ಲಕ್ಷ ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಸೆಸ್ ಇಂದ 65 ಸಾವಿರ ಕೋಟಿ ಬರುತ್ತೆದೆ.ಉಳಿದ 2.65 ಲಕ್ಷ ಕೋಟಿ ನಷ್ಟ ಆಗುತ್ತಿರುವುದರಿಂದ ನಾವು ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.ರಾಜ್ಯಗಳಿಗೆ ನೀವು ರಿಸರ್ವ್ ಬ್ಯಾಂಕ್ ಗಳಿಂದ ಸಾಲ ಪಡೆದು ತಿರಿಸಿಕೊಳ್ಳಿ ಎಂದು ಕೇಂದ್ರ ವಿತ್ತ ಸಚಿವರು ಹೇಳಿದ್ದಾರೆ.ಇದರ ಬದಲು ಕೇಂದ್ರವೇ ಏಕೆ ರಿಸರ್ವ್ ಬ್ಯಾಂ ಕಿನಿಂದ ಸಾಲ ಪಡೆದು ರಾಜ್ಯಗಳಿಗೆ ನೀಡಬಾರದು? ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳ ಮೇ ಲೆ ಹಾಕುತ್ತಿರುವುದು ಏಕೆ? ಒಪ್ಪಂದದ ಪ್ರಕಾರ ನಷ್ಟ ತುಂಬಿಕೊಡ ಬೇಕಾಗಿರುವುದು ನಿಮ್ಮ ಕರ್ತವ್ಯವಲ್ಲವೇ? ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಒತ್ತಡ ಹಾಕುತ್ತಿರುವ ನೀತಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಇದೇ ವೇಳೆ ರಾಜ್ಯಕ್ಕೆ ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಜಿ ಎಸ್ ಟಿ ಪರಿಹಾರವನ್ನು ನೀಡಿ ಎಂದು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ರಾಜ್ಯದಲ್ಲಿ ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದ ನ್ನು ನಂಬಿದ ರಾಜ್ಯದ ಜನರು 25 ಜನ ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಾರೆ.ಉಪಚುನಾವಣೆಯಲ್ಲಿ ನಿಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.ಜನರು ನಿಮ್ಮ ಮೇಲಿಟ್ಟಿರುವ ನಂಬಿಕೆಗೆ ಈಗ ನೀವು ಮಾಡುತ್ತಿರುವುದು ದ್ರೋಹವಲ್ಲವೇ? ರಾಜ್ಯಗಳನ್ನು ಕೇಂದ್ರ ದಿವಾಳಿಯಾಗುವತ್ತ ಕೊಂಡೊಯ್ಯುತ್ತಿದೆ .ಹಾಗಾಗಿ ಕೇಂದ್ರದ ಈ ಸಲ ಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಕ್ಕೆ ಧಮ್ ಇದ್ದರೆ ನೀವೆ ಸಾಲ ತೆಗೆದುಕೊಂಡು ನಮಗೆ ಜಿಎಸ್ ಟಿ ಪರಿಹಾರ ಕೊಡಿ ಎಂದು ಕೇಳ ಲಿ ಮತ್ತು ಸರ್ವಪಕ್ಷ ನಿಯೋಗ ಕೊಂಡೊಯ್ದು ಕೇಂದ್ರದ ಮೇಲೆ ಒತ್ತಡ ಹೇರಲಿ.ಇದರ ಜೊತೆಗೆ 15ನೇ ಹಣಕಾ ಸು ಆಯೋಗದಿಂದ ಕೂಡ ನಮಗೆ ಅನ್ಯಾಯವಾಗಿದೆ.ಅದರ ಜೊತೆಗೆ ಜಿಎಸ್ ಟಿ ಪರಿಹಾರವನ್ನು ಕೊಡಲ್ಲ ಎಂದರೆ ಹೇಗೆ? ಎಂದರು.ಜಿಡಿಪಿ ನೆಲಕಚ್ಚಿದೆ,ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ ಹೀಗಿರುವಾಗ ಮತ್ತೆ ರಾಜ್ಯ ಸರ್ಕಾರ ಸಂಬಳ ನೀಡಲು ಸಾಲ ಪಡೆದುಕೊಂಡರೆ ಅಭಿವೃದ್ಧಿ ಕಾರ್ಯಗಳು ಆಗುವುದಿಲ್ಲ.ನಮ್ಮ ಆಡಳಿತಾವ ಧಿಯಲ್ಲಿ ಆರ್ಥಿಕ ಶಿಸ್ತು ಅತ್ಯುತ್ತಮವಾಗಿ ನಿರ್ವಹಣೆಯಾಗಿತ್ತು.ಸಾಲದ ಪ್ರಮಾಣ ಜಿಡಿಪಿ 25%ಗಿಂತಲೂ ಕಡಿ ಮೆಯಿತ್ತು.ಈಗ ಸಾಲ ಅನಿಯಂತ್ರಿತವಾಗಿ ಜಾಸ್ತಿಯಾಗುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿ,ಅಭಿ ವೃದ್ಧಿಯಲ್ಲಿ 10 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ ಎಂದು ಅವರು ವಿಶ್ಲೇಷಿಸಿದರು.
ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು.ರಾಜ್ಯ ಗಳಿಗೆ ನೀವೇ ಸಾಲ ತೆಗೆದುಕೊಳ್ಳಿ ಎಂದು ಹೇಳುವುದೇ ವಿಪರ್ಯಾಸ.ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ.ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಹೇಡಿ ಸರ್ಕಾರ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರದ ಈ ನೀತಿಯನ್ನು ವಿರೋಧ ಮಾಡಿವೆ.
ಆದರೆ ನಿರ್ಮಲಾ ಸೀತಾರಾ ಮನ್ ಅವರು ಇದನ್ನು ದೇವರ ಆಟ ಎಂದು ಕೈಚೆಲ್ಲಿದ್ದಾರೆ ಎಂದು ಅವರು ಕಿಡಿಕಾರಿದರು.
ಈ ವರ್ಷವೂ ಪ್ರವಾಹ ಬಂದಿದ್ದು 56 ತಾಲೂಕುಗಳ 1000 ಹಳ್ಳಿಗಳು ಪ್ರವಾಹದಿಂದ ಬಾಧಿಸಲ್ಪಟ್ಟಿದೆ.ಸುಮಾ ರು 1 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ.ಮನೆಗಳು ಕುಸಿದುಬಿದ್ದಿವೆ,ಜಾನುವಾರುಗಳು ಸಾವಿಗೀಡಾಗಿವೆ.ರಾಜ್ಯ ಸರ್ಕಾರವೇ ಸುಮಾರು 4 ಸಾವಿರ ಕೋಟಿ ನಷ್ಟವಾಗಿದೆ ಎಂದಿದೆ.ಈ ಹಿಂದೆಯೂ ಸರಿಯಾಗಿ ಪರಿಹಾರ ಕೊಟ್ಟಿ ಲ್ಲ.35,000ಕೋಟಿ ಪರಿಹಾರ ಕೇಳಿದ್ದರೆ ಬರೀ 1800 ಕೋಟಿ ಪರಿಹಾರ ನೀಡಲಾಗಿದೆ.ಇನ್ನು ಮನೆ ಕಳೆದುಕೊಂ ಡವರಿಗೆ ಮನೆ ಕಟ್ಟಿಕೊಟ್ಟಿಲ್ಲ.ಹಳ್ಳಿಗಳ ಸ್ಥಳಾಂತರವಾಗಿಲ್ಲ, ಶಾಲೆಗಳ ಪುನರ್ ನಿರ್ಮಾಣ ಕಾರ್ಯವೂ ಆಗಿಲ್ಲ, ಮತ್ತೆ ಈ ವರ್ಷವೂ ಪ್ರವಾಹ ಬಂದಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ