ಬೆಂಗಳೂರು
ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆ ಮತ್ತು ಕೃಷ್ಣಾ,ಗೋದಾವರಿ ಮತ್ತಿತರ ನದಿಗಳು ಉಕ್ಕಿಹರಿದ ಪರಿಣಾಮ ಉಂಟಾದ ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಕೇಂದ್ರದ ಆರು ಜನರ ತಂಡ ರಾಜ್ಯ ವಿವಿಧ ಭಾಗಗಳಲ್ಲಿ ಅಧ್ಯಯನ ನಡೆಸಲಿದೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ತಂಡ ಸಭೆ ನಡೆಲಿದ್ದು, ಪ್ರವಾಹ ಪರಿಸ್ಥಿತಿ ಕುರಿತು ಸ್ಥೂಲ ಮಾಹಿತಿ ಪಡೆದುಕೊಳ್ಳಲಿದೆ.
ಬಳಿಕ ಮಂಗಳವಾರ 8 ರಂದು ಈ ತಂಡ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ನೆರೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ. ಕೊಡಗು, ವಿಜಯಪುರ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಿಗೆ ತೆರಳಿ ವಸ್ತುಸ್ಥಿತಿ ಮಾಹಿತಿ ಸಂಗ್ರಹಿಸಲಿದೆ. ಬಳಿಕ ಕೇಂದ್ರಕ್ಕೆ ಸಮಗ್ರ ವರದಿಸಲ್ಲಿಸಲಿದೆ.
ಕಂದಾಯ ಸಚಿವ ಆರ್. ಅಶೋಕ್ ಅವರು ಇದೇ 9 ರಂದು ಕೇಂದ್ರ ತಂಡದ ಜತೆ ಸಭೆ ನಡೆಸಲಿದ್ದು, ನೆರೆ ಹಾನಿ ಕುರಿತು ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ರಾಜ್ಯದಲ್ಲಿ 4800 ಕೋಟಿ ನಷ್ಟವಾಗಿದ್ದು, ಹಾನಿ ಕುರಿತು ಕೇಂದ್ರಕ್ಕೆ ಪ್ರಾತ್ಯಕ್ಷಿಕೆ ಮೂಲಕ ಮನವರಿಕೆ ಮಾಡಿಕೊಡಲಿದೆ.
ಈ ಮಧ್ಯೆ ಕೇಂದ್ರ ಸರ್ಕಾರ ಎರಡನೇ ಕಂತಿನಲ್ಲಿ ರಾಜ್ಯಕ್ಕೆ 295 ಕೋಟಿ ರೂ ಹಣ ಬಿಡುಗಡೆ ಮಾಡಿದ್ದು, ಪರಿಹಾರ ಕಾರ್ಯಕ್ಕೆ ನೆರವಾಗುವ ಉದ್ದೇಶದಿಂದ 9 ಎನ್.ಡಿ.ಆರ್.ಎಫ್. ತಂಡಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
