ಕುಡಿಯುವ ನೀರಿನ ಸಮಸ್ಯೆ ವಿಚಾರ : ಸಿಇಓ ಜೊತೆ ಶಾಸಕರ ಚಕಮಕಿ

ಚಿತ್ರದುರ್ಗ

     ಚಿತ್ರದುರ್ಗ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಬಿಗಡಾಯಿಸಿರುವ ಕುಡಿಯುವ ನೀರಿನ ಬೀಕರ ಸಮಸ್ಯೆ ನಿವಾರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ಸೋಮವಾರ ಜರುಗಿತು.

      ಈಗ ಬೇಸಿಗೆ ಕಾಲವಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಹುತೇಕ ಗ್ರಾಮಸ್ಥರು ಈ ಸಂಬಂಧ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಚುನಾಯಿತ ಪ್ರತಿನಿಧಿಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.

     ಎಂದಿನಂತೆ ಶಾಸಕರ ಬಳಿ ಕೆಲವು ಗ್ರಾಮಸ್ಥರು ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮನವಿ ಮಾಡಿಕೊಂಡಿದ್ದರು. ಸೋಮವಾರ ತಾಲ್ಲೂಕಿನ ಸೊಲ್ಲಾಪುರ, ಜೆ.ಎನ್.ಕೋಟೆ, ತಿಮ್ಮಪ್ಪನಹಳ್ಳಿ, ಬಿ.ಬಳ್ಳೆಕೋಟೆ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಖಾಲಿಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾದರು.

      ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ ನಡುವೆ ವಾಗ್ವಾದ ನಡೆಯಿತು. ಹಳ್ಳಿಗಳಲ್ಲಿ ಬೇಸಿಗೆ ಕಾರಣದಿಂದಾಗಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜನರಿಗೆ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ಇದು ಅಧಿಕಾರಿಗಳ ಕರ್ತವ್ಯ ಎಂದು ಶಾಸಕರು ಈ ವೇಳೆ ಹೇಳಿದರು.

      ಇದಕ್ಕೆ ಪ್ರತಿಕ್ರಿಯಿಸಿದ ಸತ್ಯಭಾಮ ನಾನು ಭಾನುವಾರವೂ ಕೆಲಸ ಮಾಡಿದ್ದೇನೆ ಎಂದು ಹೇಳಿದಾಗ, ಇಂತಹ ತುರ್ತು ಸಂದರ್ಭದಲ್ಲಿ ಕಾಲಮಿತಿ ಇರಕೂಡದು. ಮೊದಲು ನೀರಿನ ವ್ಯವಸ್ಥೆ ಮಾಡಿ. ಪಿಡಿಓಗಳ ಸಭೆ ಕರೆದು ತುರ್ತು ಕ್ರಮ ಕೈಗೊಳ್ಳುವಂತೆ ಶಾಸಕರು ತಾಕೀತು ಮಾಡಿದರು

      ಇದರಿಂದ ಸಿಡಿಮಿಡಿಗೊಂಡ ಇಸಿಓ ಅವರು, ಜೋದು ದ್ವನಿಯಲ್ಲಿ ಮಾತನಾಡಲು ಮುಂದಾದರು. ಹೀಗಗಿ ಕುಪಿತಗೊಂಡ ಶಾಸಕ ತಿಪ್ಪಾರೆಡ್ಡಿ, ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಯಾವುದೇ ಕಾನೂನುಗಳು ಅಡ್ಡಿಯಾಗುವುದಿಲ್ಲ. ಮೊದಲು ಗಂಬೀರ ಸಮಸ್ಯೆ ಇರುವ ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಕೊಡಿ ಎಂದು ಜೋರು ದ್ವನಿಯಲ್ಲಿ ಹೇಳಿದರು.

      ಮೊನ್ನೆ ಬೆಳಗಟ್ಟ ಪಂಚಾಯಿತಿ ವ್ಯಾಪ್ತಿಯ ಜನರು ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದ್ದಾರೆ. ಇವತ್ತು ಸೊಲ್ಲಾಪುರ ಗ್ರಾಮಸ್ಥರು ಬಂದಿದ್ದಾರೆ. ನಿತ್ಯವೂ ಜನರು ತಮ್ಮ ಬಳಿ ಬಂದು ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಬೊರ್‍ವೆಲ್ ಸಹ ವಿಫಲವಾಗಿದ್ದು, ನೀರಿನ ತೊಂದರೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.ಜಾನುವಾರುಗಳಿಗೂ ನೀರಿಲ್ಲ, ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಆಗ್ರಹಿಸಿದರು

      ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು, ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಹೇಳಿದರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಧಿಕಾರಿಗಳ ವರ್ತನೆ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ದೂರು ಸಲ್ಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap