ಮಾವಿನ ಕುಂಟೆ ಗ್ರಾಮದ ಕಂಟೈನ್ಮೆಂಟ್ ವಲಯಕ್ಕೆ ಸಿಇಓ ಭೇಟಿ

ತುಮಕೂರು

     ತಾಲ್ಲೂಕಿನ ಬೆಳ್ಳಾವಿ ಗ್ರಾಮ ಪಂಚಾಯತ್ ವ್ಯಾಪ್ತಿ ಮಾವಿನಕುಂಟೆ ಗ್ರಾಮದ ವ್ಯಕ್ತಿಗೆ ಇಂದು ಕೋರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದರಿ ಗ್ರಾಮವನ್ನು ಕಂಟೈನ್ ಮೆಂಟ್ ಜೋನ್ ಆಗಿ ಪರಿವರ್ತಿಸಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಅವರು ಇಂದು ಮಧ್ಯಹ್ನಾ ಭೇಟಿ ನೀಡಿ ಪರಿಶೀಲಿಸಿದರು.

     ಗ್ರಾಮದಲ್ಲಿ 35 ಮನೆಗಳಿದ್ದು, 128 ಜನರು ವಾಸಿಸುತ್ತಿದ್ದಾರೆ. ಗ್ರಾಮದ ಸುತ್ತ 600 ಮೀಟರ್ ಬಫರ್ ವಲಯವನ್ನಾಗಿ ಗುರುತಿಸಲಾಗಿದೆ. ಸ್ಥಳದಲ್ಲಿದ್ದ ಆರೋಗ್ಯ, ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು/ನೌಕರರಿಗೆ ಅಗತ್ಯ ಸೂಚನೆಗಳನ್ನು ನೀಡಿದ ಅವರು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ ಮಾಡಲು ತಿಳಿಸಿದರು.

      ಈಗಾಗಲೇ ಗುರುತಿಸಲಾಗಿರುವ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ. ಕಂಟೈನ್ ಮೆಂಟ್ ಜೋನ್ ನಲ್ಲಿರುವ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಪೂರೈಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್, ಪಿ.ಡಿ.ಒ. ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link