ತುಮಕೂರು
ತುಮಕೂರು ಜಿಲ್ಲೆಯು 2012ರ ಬೇಸ್ ಲೈನ್ ಸರ್ವೆ ಪ್ರಕಾರ ಈಗಾಗಲೇ ಓ.ಡಿ.ಎಫ್. ಘೋಷಣೆಯಾಗಿದ್ದು, ನಂತರ ಎಲ್.ಓ.ಬಿ ಯಡಿ ಅರ್ಹ ಶೌಚಾಲಯ ಫಲಾನುಭವಿಗಳಿಗೆ ಶೌಚಾಲಯ ಕಲ್ಪಿಸಲಾಗಿದ್ದು, ಪ್ರಸ್ತುತ ಮತ್ತೊಮ್ಮೆ ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸುವ ಸಲುವಾಗಿ ಎನ್.ಓ.ಎಲ್.ಬಿ ಸರ್ವೆಯಡಿ ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಅವಕಾಶದಂತೆ ಈಗಾಗಲೇ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸರ್ವೇ ಕಾರ್ಯವನ್ನು ಕೈಗೊಂಡು ಅರ್ಹ ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸಿ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ (ಗ್ರಾ) ಎನ್.ಎಲ್.ಓ.ಬಿ ತಂತ್ರಾಶದಲ್ಲಿ ದಾಖಲಿಸಲಾಗಿರುತ್ತದೆ.
ಈ ಸಂಬಂಧ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶುಭಾ ಕಲ್ಯಾಣ್ ಅವರು ರ್ಯಾಡಂ ಆಗಿ ಭೇಟಿ ನೀಡಿ, ಅರ್ಹ ಫಲಾನುಭವಿಗಳನ್ನು ಸರ್ವೆ ಕಾರ್ಯದಲ್ಲಿ ಸೇರ್ಪಡೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಎಂಬುದನ್ನು ಪರಿಶೀಲಿಸಲು ಹಾಗೂ ಸರ್ಕಾರದ ಇತರೆ ಯೋಜನೆಗಳನ್ನು ಪರಿವೀಕ್ಷಿಸಲು ತುಮಕೂರು ತಾಲ್ಲೂಕಿನ ಮಲ್ಲಸಂದ್ರ, ಗುಬ್ಬಿ ತಾಲ್ಲೂಕಿನ ಅಡಗೂರು, ನಿಟ್ಟೂರು ಗ್ರಾಮ ಪಂಚಾಯಿತಿಗಳಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರೊಂದಿಗೆ ಚರ್ಚಿಸಿ, ಶೌಚಾಲಯಗಳ ನಿರ್ಮಾಣ, ಬಳಕೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.
ಮಲ್ಲಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಮಾತೃವಂದನಾ ಹಾಗೂ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಫಲಾನುಭವಿಗಳ ಕೆಲವು ಮನೆಗಳಿಗೆ ಭೇಟಿ ನೀಡಿ ಸದರಿ ಯೋಜನೆಯ ಪ್ರಯೋಜನ ಪಡೆದಿರುವ ಕುರಿತ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಗುಬ್ಬಿ ತಾಲ್ಲೂಕಿನ ಅಡಗೂರು ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ತಿಪಟೂರು ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಜಿ.ಪಂ.ನ ಮುಖ್ಯ ಯೋಜನಾಧಿಕಾರಿ ಬಸವನಗೌಡ, ಯೋಜನಾ ಮತ್ತು ಅಂದಾಜು ಮೌಲ್ಯಮಾಪನ ಅಧಿಕಾರಿ ಗಾಯತ್ರಿ ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
