ಬೆಂಗಳೂರು
ಮನೆ ಮುಂಭಾಗ ರಂಗೋಲಿ ಹಾಕುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯಸರವನ್ನು ಹಿಂದಿನಿಂದ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ದುರ್ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ದೊಡ್ಡಬಿದರಕಲ್ಲುವಿನ ಮನೆಯ ಮುಂಭಾಗ ಬೆಳಿಗ್ಗೆ 5.30ರ ವೇಳೆ ಗಾಯಿತ್ರಿ ಅವರು, ನೀರು ಹಾಕಿ ರಂಗೋಲಿ ಹಾಕುತ್ತಿದ್ದಾಗ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಅವರ ಕತ್ತಿನಲ್ಲಿದ್ದ 30 ಗ್ರಾಂ ತೂಕದ ಮಾಂಗಲ್ಯಸರವನ್ನು ಕಸಿದು ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದಾವಿಸಿರುವ ಪೀಣ್ಯ ಪೆಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
