ತುಮಕೂರು
ಪ್ರಸ್ತುತ “ಕೋವಿಡ್-19” ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆಯು ಆಸ್ತಿದಾರರಿಂದ ಆಸ್ತಿ ತೆರಿಗೆ, ನೀರಿನ ಶುಲ್ಕ ಮತ್ತು ಯು.ಜಿ.ಡಿ. ಶುಲ್ಕವನ್ನು ಆನ್‍ಲೈನ್ ಮೂಲಕ ಮಾತ್ರ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ತಿಳಿಸಿದ್ದಾರೆ.
ಇದರಂತೆ ಸಾರ್ವಜನಿಕರು ಪಾಲಿಕೆಯ ಆನ್‍ಲೈನ್ ವಿಳಾಸವಾದ www.tumakurucitycorp.org ಮುಖಾಂತರ ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದ್ದಾರೆ.
ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಸುವ ಪದ್ಧತಿಯಡಿ 2020-21 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಬೇಟ್ ನೀಡಲಾಗುತ್ತಿತ್ತು. ಆದರೆ ರಾಜ್ಯದಲ್ಲಿ “ಕೋವಿಡ್-19” ಇರುವುದರಿಂದ ಸದರಿ ಶೇ.5 ರಷ್ಟು ರಿಬೇಟ್ ಅನ್ನು ಮೇ 31 ರವರೆಗೆ ವಿಸ್ತರಿಸಿ ಪೌರಾಡಳಿತ ನಿರ್ದೇಶನಾಲಯವು ಆದೇಶ ಹೊರಡಿಸಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿ ನಗರದ ಅಭಿವೃದ್ಧಿ ಮತ್ತು “ಕೋವಿಡ್-19” ವಿರುದ್ಧ ಹೋರಾಟಕ್ಕೆ ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತ ಭೂಬಾಲನ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ