ಬೆಂಗಳೂರು:
ರಾಮನಗರ ತಾಲೂಕಿನಲ್ಲಿ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ಕಳೆದ 15 ದಿನಗಳಿಂದ ಈ ತಾಲೂಕಿನ ಅರೇಹಳ್ಳಿ, ಬಿಳಗುಂಬ ಗ್ರಾಮಗಳಲ್ಲಿ ಚಿರತೆ ದಾಳಿ ನಡೆಸಿ ಎರಡು ಮೇಕೆ, ಕುರಿ ಹಾಗೂ ನಾಯಿಯನ್ನ ಹೊತ್ತೊಯ್ದಿತ್ತು. ಇದರ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳ ಹಿಂದೆ ಅರೇಹಳ್ಳಿ ಗ್ರಾಮದ ಮರಿಚಿಕ್ಕೇಗೌಡರ ಜಮೀನಿನಲ್ಲಿ ಚಿರತೆ ಸೆರೆಗಾಗಿ ಬೋನು ಇಟ್ಟಿದ್ದರು.ತಡರಾತ್ರಿ ಆಹಾರ ಅರಸಿ ಬಂದ ಮೂರುವರೆ ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದೆ.ಚಿರತೆ ಹಾವಳಿಯಿಂದ ಬೇಸತ್ತಿದ್ದ ಗ್ರಾಮಸ್ಥರು ಈಗ ನಿಟ್ಟುಸಿರು ಬಿಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಚಿರತೆಯನ್ನ ರವಾನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








