ಬೆಂಗಳೂರು
ನಗರದ ಹೊರವಲಯದ ಐಟಿಸಿ ಕಾರ್ಖಾನೆಗೆ ನುಗ್ಗಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಸಾದಹಳ್ಳಿ ಗೇಟ್ ಬಳಿ ಆಹಾರ ಅರಸಿ ಬಂದಿದ್ದ ಚಿರತೆಯು ಐಟಿಸಿ ಫ್ಯಾಕ್ಟರಿಯಲ್ಲಿ ನುಗ್ಗಿದೆ ಚಿರತೆಯನ್ನು ಕಂಡು ಹೊರಗೋಡಿದ ಕಾರ್ಖಾನೆಯ ಸಿಬ್ಬಂದಿ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು.
ಚಿರತೆ ಸೆರೆಗೆ ಕಾರ್ಯಾಚರಣೆಗೆ ಇಳಿದ ಅರಣ್ಯಾಧಿಕಾರಿಗಳು ನಾಯಿಯೊಂದನ್ನ ಕಟ್ಟಿಹಾಕಿದ ಬೋನ್‍ನನ್ನು ಇಟ್ಟಿದ್ದು ಅದರೊಳಗೋಗಿ ಸೆರೆಯಾಗಿರುವ 5 ವರ್ಷದ ಗಂಡು ಚಿರತೆಯನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ. ಇದರಿಂದ ಕಂಪನಿ ಸಿಬ್ಬಂದಿ ಮತ್ತು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
