ತಿಪಟೂರು
ತಾಲ್ಲೂಕಿನ ಕೆರೆಗೋಡಿ ರಂಗಾಪುರದ ಕೆರೆಗೋಡಿ ಕೆರೆಯ ಅಂಗಳದಲ್ಲಿ ಇಟ್ಟಿದ್ದ ಬೋನಿಗೆ ಸುಮಾರು ಏಳು ವರ್ಷದ ಚಿರತೆಯೊಂದು ಬಲೆಗೆ ಬಿದ್ದಿದ್ದು, ಈ ಭಾಗದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ
ಈ ಭಾಗದಲ್ಲಿ ಸುಮಾರು ಮೂರರಿಂದ ನಾಲ್ಕು ಚಿರತೆಗಳು ಇವೆ ಎಂದು ಗ್ರಾಮಸ್ಥರು ಈಗಾಗಲೆ ಅರಣ್ಯ ಇಲಾಖೆಯ ಅಧಿಕಾರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು. ಸೋಮವಾರ ಬೆಳಗಿನ ಜಾವ ಬೋನಿಗೆ ಚಿರತೆ ಬಿದ್ದಿದೆ. ಸುಮಾರು ದಿನಗಳಿಂದ ಈ ಭಾಗದಲ್ಲಿ ಅನೇಕ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಲು ಯತ್ನಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಾದ ರಾಕೇಶ್ ಕುಮಾರ್ ಹಾಗೂ ಗ್ರಾಮಾಂತರ ಪೆÇಲೀಸ್ ಠಾಣೆ ಸಬ್‍ಇನ್‍ಸ್ಪೆಕ್ಟರ್ ಕೃಷ್ಣಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ