ಬೆಂಗಳೂರು:
ಗುತ್ತಿಗೆದಾರರಿಗೆ ಕಾಮಗಾರಿಯ ಬಿಲ್ ಪಾವತಿಯ ವೇಳೆ ಬಿಬಿಎಂಪಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಡಾ.ಆರ್. ಗೋವಿಂದರಾಜ್ ಅವರು ನಿಯಮಬಾಹಿರವಾಗಿ 680 ಕೋಟಿ ರೂ. ಪಾವತಿ ಮಾಡಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಗುತ್ತಿಗೆದಾರರಿಗೆ ಹಣ ಬಿಡುಗಡೆ ಜೇಷ್ಠತೆ ನಿಯಮ ಅನುಸರಿಸಿ ಹಣ ಬಿಡುಗಡೆ ಮಾಡಬೇಕೆಂಬ ನಿಯಮ ಉಲ್ಲಂಘಿಸಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಅ.2ರಂದು ಏಕಾಏಕಿ ಮುಖ್ಯ ಲೆಕ್ಕಾಧಿಕಾರಿ ಕಚೇರಿಯನ್ನು ಸೀಲ್ ಮಾಡಲಾಗಿತ್ತು. ಗೋವಿಂದರಾಜ್ ಅವರನ್ನು ಬಿಬಿಎಂಪಿ ಸೇವೆಯಿಂದ ಬಿಡುಗಡೆ ಮಾಡಿ, ಆರ್ಥಿಕ ಇಲಾಖೆಗೆ ವಾಪಾಸು ಕಳುಹಿಸಲಾಗಿತ್ತು.
ಇದೇ ವೇಳೆ ಆರೋಪದ ಕುರಿತು ತನಿಖೆಗೆ ಆದೇಶಿಸಲಾಗಿತ್ತು. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿರುವ ಆಯುಕ್ತರು, 43 ಪುಟಗಳ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಇವರ ಕಚೇರಿಯಲ್ಲಿ ಇರುವ ಎಲ್ಲ ಕಡತಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಕ್ರಮ ಬಯಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ಆಯುಕ್ತರು ಪತ್ರದ ಆಧಾರದ ಮೇಲೆ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಜೆ.ಶಶಿಧರ್ ಅವರು ಡಾ.ಆರ್. ಗೋವಿಂದ ರಾಜ್ ಅವರನ್ನು ಇದಾಗಲೇ ಅಮಾನತು ಮಾಡಲಾಗಿದೆ. ಅಲ್ಲದೇ ಇಲಾಖಾ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ