ಮುಖ್ಯಮಂತ್ರಿಯಿಂದ ರೈತರಿಗೆ ಅನ್ಯಾಯ : ಮೋದಿ

ಕಲಬುರಗಿ:
        ಇಡೀ ದೇಶದಲ್ಲಿ ಹಲವಾರು ಸಾವಿರ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲ ದೊರೆತಿದೆ ಆದರೆ  ರಾಜ್ಯದ ಅರ್ಹ ಫಲಾನುಭವಿ ರೈತರಿಗೆ ಇನ್ನೂ ಸಿಕ್ಕಿಲ್ಲ. ರಾಜ್ಯ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸಲು ವಿಫಲವಾಗಿದೆ ಪ್ರಧಾನಿ ಮೋದಿ ಹೇಳಿದ್ದಾರೆ. 
         ವಿವಿಧ ಕಾಮಗಾರಿಗಳ ಶಿಲಾನ್ಯಾಸ, ಲೋಕಾರ್ಪಣೆಗೊಳಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ತಮ್ಮ ಸರ್ಕಾರ ಕೃಷಿ, ಕಾರ್ಮಿಕ, ಆರೋಗ್ಯ ಕ್ಷೇತ್ರಗಳಿಗೆ ನೀಡಿರುವ ಯೋಜನೆ, ಕೊಡುಗೆಗಳನ್ನು ಜನತೆಗೆ ವಿವರಿಸಿದ್ದಾರೆ. ಜೊತೆ ಜೊತೆಗೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. 
         “ರಾಜ್ಯ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನೀಡಬೇಕಿತ್ತು. ಆದರೆ ನಮಗೆ ಕರ್ನಾಟಕದ ರೈತರ ಪಟ್ಟಿಯೇ ಇನ್ನೂ ಸಿಕ್ಕಿಲ್ಲ. ಹಲವು ರಾಜ್ಯಗಳ ರೈತರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ಕಿಸಾನ್ ಸಮ್ಮಾನ್ ಯೋಜನೆಯ ಹಣ ತಲುಪಿದೆ. ಆದರೆ ರಾಜ್ಯದ ರೈತರಿಗೆ ಹಾಕಲಾಗಿ.
ಇದಕ್ಕೆಲ್ಲಾ ಕಾರಣ ರಾಜ್ಯದಲ್ಲಿರುವ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಹಾಗೂ ಅಧಿಕಾರ ದಾಹ ಹೊಂದಿರುವ ಕಾಂಗ್ರೆಸ್” ಎಂದು ಮೋದಿ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
      “ಕೇಂದ್ರ ಸರ್ಕಾರ ನೇರವಾಗಿ ರೈತರ ಖಾತೆಗೆ ಹಣ ಹಾಕಲಿದೆ. ಅರ್ಹಫಲಾನುಭವಿಗಳನ್ನು ಗುರುತಿಸುವುದು ಮಾತ್ರ ರಾಜ್ಯ ಸರ್ಕಾರದ ಕೆಲಸ. ಕೆಂದ್ರ ಸರ್ಕಾರವೇ ಹಣ ನೀಡಿದರೂ ಅದನ್ನು ಫಲಾನುಭವಿಗಳಿಗೆ ತಲುಪಿಸಲು ನಿಮಗೇಕೆ ಇಷ್ಟು ಹೊಟ್ಟೆ ಉರಿ” ಎಂದು ಮೋದಿ ಸಮ್ಮಿಶ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 
    “ಕರ್ನಾಟಕದ ರೈತ ವಿರೋಧಿಗಳು ಸಮ್ಮಿಶ್ರ ಸರ್ಕಾರದ ರೂಪದಲ್ಲಿ ಕುಳಿತಿದ್ದಾರೆ. ಅಧಿಕಾರದ ದಾಹ ಇರುವ ಕಾಂಗ್ರೆಸ್ ಹಾಗೂ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿಯಿಂದಾಗಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಸಾಲ ಮನ್ನ ಹೆಸರಿನಲ್ಲಿ ಸುಳ್ಳು ಭರವಸೆ ನೀಡಿ ರೈತರ ಬೆನ್ನಿಗೆ ಚೂರಿ ಹಾಕಿದ್ದಾರೆ. ಜನತೆ ಕಣ್ಣಿಗೆ ಮಣ್ಣೆರಚಿದ್ದಾರೆ. ಅವರು ಬೇರೆಯವರು ಅಭಿವೃದ್ಧಿ ಮಾಡಿದರೆ ಅದಕ್ಕೂ ಅಡ್ಡಗಾಲು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಸಣ್ಣ ತಪ್ಪಿನಿಂದಾಗಿ ಅಭಿವೃದ್ಧಿ ಸ್ಥಗಿತಗೊಂಡಿದೆ. ದೇಶಕ್ಕೂ ಇದೇ ಸ್ಥಿತಿ ಬರಬೇಕಾ? ಎಂದು ಮೋದಿ ಪ್ರಶ್ನಿಸಿದ್ದಾರೆ. 
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap