ಶಿರಾ ತಾ|| ಚಿಕ್ಕನಹಳ್ಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

0
21

ಶಿರಾ:

       ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿಗೆ ಬಯಲುಮುಕ್ತ ಶೌಚಾಲಯಕ್ಕೆ ಸಂಬಂಧಿಸಿದಂತೆ ನೂರಕ್ಕೆ ನೂರರಷ್ಟು ಸಾಧನೆಗೈದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಗಾಂದಿ ಗ್ರಾಮ ಪುರಸ್ಕಾರವನ್ನು ನೀಡಿ ಗೌರವಿಸಿದೆ.

       ತಾಲ್ಲೂಕಿನ ಚಿಕ್ಕನಹಳ್ಳಿಯ ಗ್ರಾಮ ಪಂಚಾಯ್ತಿಯು ಈ ಹಿಂದೆ ಬಯಲುಮುಕ್ತ ಶೌಚಾಲಯದಲ್ಲಿ ವಿಶೇಷ ಸಾಧನೆಗೈದ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಗಾಂಧಿ ಪುರಸ್ಕಾರಕ್ಕೂ ಅರ್ಹವಾಗಿದ್ದು ಇತ್ತೀಚೆಗಷ್ಟೆ ಬೆಂಗಳೂರಿನ ಬ್ಲಾಂಕೇಟ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾ.ಪಂ. ಅಧ್ಯಕ್ಷೆ ಜಿ.ರಾಜೇಶ್ವರಿ, ಉಪಾಧ್ಯಕ್ಷರಾದ ಉಮೇಶ್ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜು ಅವರಿಗೆ 5 ಲಕ್ಷ ರೂಗಳ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here