ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ.!

ಬೆಂಗಳೂರು

     ಬಡತನ, ನಿರುದ್ಯೋಗ, ಅನಕ್ಷರತೆ ಇನ್ನಿತರ ಕಾರಣಗಳಿಂದ ವ್ಯಾಪಕವಾಗಿ ಬೆಳೆಯುತ್ತಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಶಂಕರ್ ಬಿ.ಅಮರಣ್ಣವರ ತಿಳಿಸಿದ್ದಾರೆ

      ನಗರದ ಕಬ್ಬನ್ ಪಾರ್ಕ್‍ನ ಬಾಲಭವನದಲ್ಲಿ ಮಂಗಳವಾರ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಶ್ರಮ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು ಬಡತನ ನಿರ್ಮೂಲನೆ ಹಾಗೂ ಶಿಕ್ಷಣ ಸೌಲಭ್ಯ ದೊರೆತರೆ ಮಾತ್ರ, ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಸಾಧ್ಯ ಎಂದರು.

     ಶಾಲೆಗೆ ತೆರಳಿ ಶಿಕ್ಷಣ ಕಲಿಯಬೇಕಾದ ಮಕ್ಕಳನ್ನು ಕೂಲಿ ಕೆಲಸಕ್ಕೆ ಪೋಷಕರು ಕಳುಹಿಸುತ್ತಿದ್ದಾರೆ. ಸಮಾಜದ ಪ್ರಜ್ಞಾವಂತ ನಾಗರಿಕರು, ಇದನ್ನು ಕಂಡೂ ಕಾಣದಂತೆ ವರ್ತಿಸುವುದು ಸಮಂಜಸವಲ್ಲ.ಈ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ವಿವಿಧ ಇಲಾಖೆಗಳು ಶ್ರಮಿಸುತ್ತಿದ್ದರೂ, ಇದಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ತಿಳಿಸಿದರು.

    ಬಾಲ ಕಾರ್ಮಿಕ ಪದ್ಧತಿ ದೇಶದಲ್ಲಿ ವ್ಯಾಪಕವಾಗಿ ಬೆಳೆಯಲು ಬಡತನ, ನಿರುದ್ಯೋಗ, ಅನಕ್ಷರತೆ ಪ್ರಮುಖ ಕಾರಣವಾಗಿದೆ. ಅಷ್ಟೇ ಅಲ್ಲದೆ,ಬಾಲಕಾರ್ಮಿಕ ಪದ್ಧತಿ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದೆ. ಪಾಲಕರು ಹಣದಾಸೆಗೆ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳಿಸಿ ದೇಶದ ಪ್ರಗತಿಗೆ ಮಾರಕವಾಗುತ್ತಿದ್ದಾರೆ. ಮಕ್ಕಳಿಗೆ ಕೂಲಿ ಕೆಲಸಕ್ಕೆ ಕಳಿಸುವ ಬದಲಾಗಿ ಪುಸ್ತಕ ನೀಡುವಂತಾಗಬೇಕೆಂದು ತಿಳಿಸಿದರು.

    ಬಾಲ ಕಾರ್ಮಿಕ ಪದ್ಧತಿಯಿಂದ ಶೈಕ್ಷಣಿಕವಾಗಿ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿ­ಯುತ್ತೇವೆ. ಇದು ನಿರ್ಮೂಲನೆಯಾ­ಗುವವರೆಗೂ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಅಸಾಧ್ಯ. ಇಂತಹ ಒಂದು ಸಾಮಾಜಿಕ ಪಿಡುಗನ್ನು ನಿವಾರಿಸಲು ಸಮಾಜದಲ್ಲಿನ ಪ್ರತಿಯೊಬ್ಬರೂ ಕೂಡಾ ಕೈ ಜೋಡಿಸಬೇಕು ಎಂದು ಹೇಳಿದರು.

ಉಚಿತ ಸಹಾಯವಾಣಿ

    ಬಾಲ ಕಾರ್ಮಿಕ ಮಕ್ಕಳನ್ನು ಕಂಡಲ್ಲಿ, ಉಚಿತ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಶೋಷಣೆಗೆ ಒಳಗಾದ ಮಕ್ಕಳೇ ಮಾಹಿತಿ ನೀಡಿದಲ್ಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದು ಸುಲಭವಾಗಲಿದೆ ಎಂದರು.

    ಕಾರ್ಯಕ್ರಮದಲ್ಲಿ ಹಲವು ವಿದ್ಯಾರ್ಥಿಗಳಿಗೆ ಶ್ರಮ ಸಮ್ಮಾನ್ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ವಿವಿಧ ಇಲಾಖೆಯ ಜಿಲ್ಲಾವಾರು ಅಧಿಕಾರಿಗಳು ಭಾಗಿಯಾಗಿದ್ದರು. ಇದಕ್ಕೂ ಮೊದಲು ನಡೆದ ಜಾಗೃತಿ ಜಾಥಾದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂನೆಗೆ ಎಲ್ಲರೂ ಶ್ರಮಿಸುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link