ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರು:

           ಒಂಟಿಯಾಗಿದ್ದ ಅಪ್ರಾಪ್ತ 7 ವರ್ಷದ ಬಾಲಕಿಯನ್ನು ಕುರುಕಲು ತಿಂಡಿಯ ಆಸೆ ತೋರಿಸಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ ಆಟೋ ಚಾಲಕನೊಬ್ಬನಿಗೆ ನಗರದ ಸಿಸಿಹೆಚ್ ನ್ಯಾಯಾಲಯವು ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿ 50 ಸಾವಿರ ದಂಡ ವಿಧಿಸಿದೆ.

          ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಸಿಸಿಹೆಚ್ 54ನೇ ನ್ಯಾಯಾಲಯದ ನ್ಯಾಯಮೂರ್ತಿ ಎಂ. ಲತಾಕುಮಾರಿ ಅವರು ಬನಶಂಕರಿಯ ಇಟ್ಟಮಡುವಿನ ಆಟೋಚಾಲಕ ಲಕ್ಷ್ಮಣ (52)ನಿಗೆ ಜೀವಿತಾವದಿವರೆಗೆ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

          ಕಳೆದ 2015ರ ಡಿ. 11 ರಂದು ಸಂಜೆ 5ರ ವೇಳೆ ಇಟ್ಟಮಡುವಿನ ಪಿಜಿ ಲೇಔಟ್‍ನ ವ್ಯಾಪಾರಿಯೊಬ್ಬರು ತಮ್ಮ 7 ವರ್ಷದ ಮಗಳನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಸಮಯಸಾಧಿಸಿದ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿ ಲಕ್ಷ್ಮಣ ಒಂಟಿಯಾಗಿದ್ದ ಬಾಲಕಿಯನ್ನು ಕುರುಕಲು ತಿಂಡಿ ಕೊಡುವ ನೆಪದಲ್ಲಿ ಮನೆಗೆ ಕರೆದುಕೊಂಡು ಹೋಗಿ ಬಲತ್ಕಾರವೆಸಗಿ ಅತ್ಯಾಚಾರವೆಸಗಿದ್ದನು.

         ಈ ಸಂಬಂಧ ಪ್ರಕರಣ ದಾಖಲಿಸಿದ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಇನ್ಸ್‍ಪೆಕ್ಟರ್ ಕೃಷ್ಣ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅಲ್ಲಿಂದ ಇಲ್ಲಿಯವರೆಗೆ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದನು. ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು.

         ಈ ಬಗ್ಗೆ ವಿಚಾರಣೆ ನಡೆಸಿ ವಾದ-ವಿವಾದ ಆಲಿಸಿದ ನ್ಯಾಯಮೂರ್ತಿ ಲತಾಕುಮಾರಿ ಅವರು ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

                    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link