ಚಿತ್ರದುರ್ಗ;
ಕರೋನಾ ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ಭಾನುವಾರ ಘೋಷಿಷಿದ ಲಾಕ್‍ಡೌನ್ ಯಸಸ್ಸಿಯಾಗಿದ್ದು, ಕೋಟೆನಾಡು ಸಂಪೂರ್ಣ ಬಂದ್ ಆಗಿತ್ತು. ವ್ಯಾಪಾರ ವಹಿವಾಟು, ವಾಹನಗಳ ಸಂಚಾರವೂ ಬಂದ್ ಆಗಿದ್ದರಿಂದ ಜನಜೀವನವೂ ಅಸ್ತವ್ಯಸ್ತವಾಗಿತ್ತು.ರಾಜ್ಯದಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಕಾರಣ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಡುವೆ ಲಾಕ್‍ಡೌನ್ ಘೋಷಣೆಯಿಂದಾಗಿ ಸೋಂಕು ಹರಡುವ ವೇಗಕ್ಕೆ ಬ್ರೇಕ್ ಬಿದ್ದಿದೆ. ಈ ಸೋಂಕು ಹರಡವುದನ್ನು ಗಂಭಿರವಾಗಿ ಪರಿಗಣಿಸಿದ ಸರ್ಕಾರ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಿತ್ತು
ಚಿತ್ರದುರ್ಗ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲವೂ ಬಂದ್ ಅಗಿತ್ತು.. ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಅಗತ್ಯ ಸೇವೆಗಳನ್ನು ಹೊರೆತು ಪಡಿಸಿ ಬಹುತೇಕ ಎಲ್ಲಾ ಹೊಟೇಲ್, ಅಂಗಡಿಗಳು ಬಾಗಿಲು ಮುಚ್ಚಿದ್ದವು.
ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ಇರಲಿಲ್ಲ. ಬಹುತೇಕ ಕಡೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದರಿಂದ ಜನ ಬೀದಿಗೆ ಇಳಿಯಲಿಲ್ಲ. ವಾಹನಗಳ ಸಂಚಾರವೂ ಇರಲಿಲ್ಲ. ಇಡೀ ನಗರ ಸ್ಥಬ್ದವಾಗಿತ್ತು. ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ವಾಹನಗಳ ಸಂಚಾರವಿರಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ