ಬೆಂಗಳೂರು
ಹಿಂದಿನಿಂದ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪೀಣ್ಯದ ಶರತ್(22)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಪೀಣ್ಯ ಚಾಕೋಲೇಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಬುಧವಾರ ರಾತ್ರಿ 10.50ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‍ನಲ್ಲಿ ಹೋಗುತ್ತಿದ್ದರು.
ಮಾರ್ಗ ಮಧ್ಯೆ ಪೀಣ್ಯದ ಎಲಿವೇಟೆಡ್ ಮೇಲುಸೇತುವೆ ರಸ್ತೆಯಲ್ಲಿ ವೇಗವಾಗಿ ಹಿಂದಿನಿಂದ ಬಂದ ವಾಹನ ಡಿಕ್ಕಿ ಹೊಡೆದು ಕೆಳಗೆಬಿದ್ದ ಶರತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯ ಸಂಚಾರ ಪೊಲೀಸರು ಅಪಘಾತವೆಸಗಿ ಪರಾರಿಯಾಗಿರುವ ವಾಹನಕ್ಕಾಗಿ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸೌಮ್ಯರಾಣಿ ತಿಳಿಸಿದ್ದಾರೆ.
ಲಾರಿಗೆ ಡಿಕ್ಕಿ ತಲೆ ಛಿದ್ರ
ರಸ್ತೆ ಬಂದಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಮಗ ಸ್ಥಳದಲ್ಲೇ ಮೃತಪಟ್ಟು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಡಾಬಸ್‍ಪೇಟೆ ಮೇಲ್ಸೇತುವೆ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಶಿರಾ ಮೂಲದ ಸವಾರ ಮಂಜುನಾಥ್‍ನ ತಲೆ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈತನ ತಂದೆ ಆಂಜಿನಪ್ಪಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








