ದಾವಣಗೆರೆ :
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಅಧ್ಯಕ್ಷತೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಎಂಸಿಸಿ, ಎಸ್‍ಎಸ್‍ಟಿ, ವಿಎಸ್‍ಟಿ, ಎಫ್‍ಎಸ್‍ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಸಿದ್ದತೆ ಕುರಿತು ಕಾರ್ಯಾಗಾರ ನಡೆಸಲಾಯಿತು.
ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಚೇತನ್ ಸೇರಿದಂತೆ ಚುನಾವಣೆಯ ವಿವಿಧ ತಂಡದ ಅಧಿಕಾರಿಗಳು ಮಾತನಾಡಿ, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ದಿನ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ವಿವಿಧ ತಂಡಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಟಿ.ಜೆ.ಉದೇಶ್, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಟಿ.ಆಂಜನೇಯ ಸೇರಿದಂತೆ ಇತರೆ ಅಧಿಕಾರಿಗಳು, ಚುನಾವಣಾ ಕರ್ತವ್ಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
