ಚಳ್ಳಕೆರೆ
ನಗರದ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಒಳ ಆವರಣದಲ್ಲಿ ಎನ್‍ಎಸ್‍ಎಸ್ ಘಟಕದ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯವನ್ನು ಭಾನುವಾರ ನಡೆಸಲಾಯಿತು. ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ, ಎನ್‍ಎಸ್‍ಎಸ್ ಅಧಿಕಾರಿ ಪ್ರೊ.ಎಂ.ಶಿವಲಿಂಗಪ್ಪ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲೇಜಿನ ಒಳ ಹಾಗೂ ಹೊರ ಆವರಣದ ಬಹುತೇಕ ಗಿಡಗಳ ಬಳಿ ಮುಳ್ಳು, ಇತರೆ ಗಿಡಗಂಟೆಗಳು ಬೆಳೆದು ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದ್ದವು. ಗಿಡಗಳ ಬೆಳವಣಿಗೆಯೂ ಸಹ ಕುಂಠಿತಗೊಂಡಿತ್ತು, ಈ ಹಿನ್ನೆಲೆಯಲ್ಲಿ ಭಾನುವಾರ ರಜೆದಿನವಾದರೂ ಸಹ 100ಕ್ಕೂ ಹೆಚ್ಚು ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಚ್ಚತಾ ಕಾರ್ಯ ನಡೆಸಿದ್ದಾರೆ. ಆವರಣದ ಎಲ್ಲಾ ಗಿಡಗಳಿಗೂ ವಿದ್ಯಾರ್ಥಿ ನೀರು ಹಾಯಿಸಿದ್ಧಾರೆ. ಗಿಡಗಳ ಬೆಳವಣಿಗೆಯಲ್ಲಿ ಹೆಚ್ಚು ಜಾಗ್ರತೆ ವಹಿಸಲಾಗುತ್ತಿದೆ. ಮುಂಬರುವ ದಿನಗಳಲ್ಲೂ ಎನ್‍ಎಸ್‍ಎಸ್ ಘಟಕದಿಂದ ಸ್ವಚ್ಚತಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ