ಹುಳಿಯಾರು:
ಹುಳಿಯಾರು ಪಟ್ಟಣದ ಬಸ್ ನಿಲ್ದಾಣದಲ್ಲಿನ ಅನಧಿಕೃತ ಫುಟ್ ಪಾತ್ ಗೂಡಂಗಡಿಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಖಾರಿ ಮಂಜುನಾಥ್ ತಿಳಿಸಿದ್ದಾರೆ.ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿದ ಅವರು ಶುಕ್ರವಾರ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕರು ಹಾಗೂ ಜಿಪಂ ಸದಸ್ಯರು ಹುಳಿಯಾರು ಬಸ್ ನಿಲ್ದಾಣದಲ್ಲಿನ ಅನಧಿಕೃತ ಗೂಡಂಗಡಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗೂಡಂಗಡಿ ಮಾಲೀಕರು ಪ್ರಾಯಾಣಿಕರು ಬಸ್‍ಗಳನ್ನು ಕಾಯಲು ನಿಲ್ಲದಂತೆ ಕಾಟ ಕೊಡುತ್ತಿದ್ದಾರೆ. ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಇರುವ ಆಸನದಲ್ಲಿ ತಮ್ಮ ಗಿರಾಕಿಗಳನ್ನು ಕೂರಿಸುತ್ತಿದ್ದಾರೆ ಎಂಬ ದೂರುಗಳು ಬಂದಿದ್ದು ತಕ್ಷಣ ತೆರವು ಮಾಡುವಂತೆ ಆದೇಶಿಸಿದ್ದಾರೆ
ಹಾಗಾಗಿ ಬಸ್ ನಿಲ್ದಾಣದ ಮುಂಭಾಗ ಹಾಗೂ ಪಟ್ಟಣ ಪಂಚಾಯಿತಿ ಮಳಿಗೆಗಳ ಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡಿರುವ ಪೆಟ್ಟಿಗೆ ಅಂಗಡಿಗಳನ್ನು ಮಾಲೀಕರು ತಕ್ಷಣ ತೆರವುಗೊಳಿಸುವುದು. ಇಲ್ಲವಾದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ತೆರವುಗೊಳಿಸುವಾಗ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ ಹಾಗೂ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
