ಬೆಂಗಳೂರು
ಬೆಂಗಳೂರಿನಲ್ಲಿ ಕೊರೋನಾ ಸೋಂಕು ಮಿತಿ ಮೀರುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ಕ್ರಮಗಳ ಬಗ್ಗೆ ಸಮಾಲೋಚಿಸಲು ಸೋಮವಾರ ನಗರ ಶಾಸಕರ ಸಭೆ ಕರೆದಿದ್ದಾರೆ.
ರಾಜಧಾನಿಯಲ್ಲಿ ಕೊರೋನಾ ಸಮುದಾಯಕ್ಕೆ ಹರಡುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ ಇದರಿಂದ ಸರ್ಕಾರ ಬೆಚ್ಚಿಬಿದ್ದಿದೆ. ಹೀಗಾಗಿ, ಕೊರೋನಾ ನಿಯಂತ್ರಣ ಮಾಡಲು ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ಶಾಸಕರ ಜೊತೆ ಚರ್ಚೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದಾರೆ ಎನ್ನಲಾಗಿದೆ. ಸೋಮವಾರ ಸಂಜೆ ಶಾಸಕರ ಸಭೆ ಕರೆಯಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ತಾಲೂಕಿನ ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ.ಜೊತೆಗೆ ಬೆಂಗಳೂರಿನ ಸಚಿವರು ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಈಗಾಗಲೇ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಶಾಸಕರ ಅಭಿಪ್ರಾಯ, ಸಲಹೆಪಡೆಯಲಿದ್ದಾರೆ ಎನ್ನಲಾಗಿದೆ .ರಾಜ್ಯದಲ್ಲಿ ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆವರೆಗೆ ರಾಜ್ಯದಲ್ಲಿ 1,694 ಕೊರೋನಾ ಸೋಂಕು ಪ್ರಕರಣ ಪತ್ತೆ ಯಾಗಿದ್ದು . 21 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರವೊಂದರಲ್ಲೇ 997 ಪ್ರಕರಣಗಳು ಬೆಳಕಿಗೆ ಬಂದಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
