ಹುಬ್ಬಳ್ಳಿ
ರಾಜ್ಯದ ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ 24 ಗಂಟೆಗಳ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದರು, ಆದರೆ ಒಂದು ವರ್ಷ ಅಧಿಕಾರ ಪೂರ್ಣವಾಗುತ್ತಿದ್ದರೂ ಸಾಲಮನ್ನಾ ಪರಿಪೂರ್ಣವಾಗಿ ಜಾರಿಯಾಗಿಲ್ಲ ಎಂದು ಟೀಕಿಸಿದರು.
ರಾಜ್ಯದ ಮೈತ್ರಿ ಸರ್ಕಾರದ ಬಗ್ಗೆ ಜನತೆ ಬೇಸರ ಮತ್ತು ಆಕ್ರೋಶಗೊಂಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಕನಿಷ್ಠ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಹಾಗೂ ದೇಶದಲ್ಲಿ 275 ಕ್ಕೂ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.ಸುದ್ದಿಗೋಷ್ಠಿಯಲ್ಲಿ ನಾಯಕರಾದ ಜಗದೀಶ್‍ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
