ಬೆಂಗಳೂರು:
ಕೋವಿಡ್-19 ಸೋಂಕಿಗೆ ತುತ್ತಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.
ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯದ ಕುರಿತು ಪ್ರಕಟಣೆ ಹೊರಡಿಸಿರುವ ಮಣಿಪಾಲ್ ಆಸ್ಪತ್ರೆ ವೈದ್ಯರ ತಂಡ, ಆಸ್ಪತ್ರೆಗೆ ದಾಖಲಾದ ದಿನದಿಂದ ಚಿಕಿತ್ಸೆಗೆ ಒಳಪಟ್ಟಿರುವ ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಯಡಿಯೂರಪ್ಪ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ನಮ್ಮ ಆಸ್ಪತ್ರೆಯ ತಜ್ಞ ವೈದ್ಯರು ಯಡಿಯೂರಪ್ಪನವರ ಜೊತೆ ನಿಕಟ ಸಂಪರ್ಕದಲ್ಲಿದ್ದು ಆರೋಗ್ಯದ ಬಗ್ಗೆ ಗಮನವಹಿಸಿದ್ದಾರೆ ಅಂತಾ ತಿಳಿಸಿದ್ದಾರೆ.
ಆಸ್ಪತ್ರೆಯಿಂದಲೇ ಸಿಎಂ ಬಿಎಸ್ ವೈ ಅವರು ಕಡತಗಳಿಗೆ ಸಹಿ ಹಾಕುವ ಕಾರ್ಯದಲ್ಲಿ ತೊಡಗಿದ್ದು, ಪ್ರವಾಹ ಮತ್ತು ಕೊರೋನಾ ವೈರಸ್ ನಿರ್ವಹಣೆ ಕುರಿತಂತೆ ಆಸ್ಪತ್ರೆಯಿಂದಲೇ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಅಂತೆಯೇ ಬಿಎಸ್ ವೈ ಅವರು, ಕರ್ನಾಟಕ ಆಡಳಿತ ಸೇವಾ ಅಧಿಕಾರಿ ಎಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಸಾವಿಗೆ ಸಿಎಂ ಬಿಎಸ್ ವೈ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸರ್ಕಾರಿ ಸಕಲ ಗೌರವಗಳೊಂದಿಗೆ ಗಂಗಾಧರಯ್ಯ ಅವರ ಅಂತ್ಯಕ್ರಿಯೆ ನಡೆಸುವ ಕುರಿತು ಭರವಸೆ ನೀಡಿದ್ದಾರೆ. ಅಂತೆಯೇ ಗಂಗಾಧರಯ್ಯ ಅವರ ಕುಟುಂಬಸ್ಥರಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದು, ಅವರ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರ ಕೆಲಸ ನೀಡುವ ಕುರಿತು ಭರವಸೆ ನೀಡಿದ್ದಾರೆ.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 2ರಂದು ಬಿ.ಎಸ್ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ