ಸಿ ಎಂ ಕಛೇರಿ ಸಿಬ್ಬಂದಿಗೆ ಕೊರೋನಾ ಸೋಂಕು ಧೃಡ…!

ಬೆಂಗಳೂರು

     ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಚೇರಿ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಹರಡುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇದರಿಂದಾಗಿ ಆತಂಕ ಹೆಚ್ಚಾಗಿದೆ.

    ನಿನ್ನೆಯಷ್ಟೇ ಮತ್ತೊಬ್ಬ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ತಗುಲಿದ ವ್ಯಕ್ತಿ ಮುಖ್ಯಮಂತ್ರಿ ಕಚೇರಿ ಎರಡನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಅವರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿ ರಾಜಪ್ಪ, ಅವರ ಚಾಲಕ ಹಾಗೂ ಮತ್ತಿಬ್ಬರು ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ತಗುಲಿರುವುದು ಕಂಡು ಬಂದಿತ್ತು.

    ಪ್ರಾರಂಭದಲ್ಲಿ RAPID ANTIGEN TEST ಗೆ ಒಳಪಡಿಸಲಾಗಿತ್ತು. ಈ ವೇಳೆ ವೈದ್ಯಕೀಯ ವರದಿಯಲ್ಲಿ ನೆಗೆಟಿವ್ ಎಂದು ಬಂದಿತ್ತು. ಬಳಿಕ ಆರ್’ಟಿ-ಪಿಸಿಆರ್ ಪರೀಕ್ಷೆಗೊಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಕಾರ್ಯದರ್ಶಿಗೂ ಈ ಹಿಂದೆ ಕೊರೊನಾ ಕಾಣಿಸಿಕೊಂಡಿತ್ತು. ಬಳಿಕ ಭೈರತಿ ಬಸವರಾಜ್ ಅವರಲ್ಲೂ ಕೂಡ ಕೊರೋನಾ ಕಾಣಿಸಿಕೊಂಡಿತ್ತು. ಇದೀಗ ಬಸವರಾಜ್ ಕ್ವಾರಂಟೈನ್ ನಲ್ಲಿದ್ದಾರೆಂದು ವರದಿಗಳಿಂದ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link