ಬೆಂಗಳೂರು
ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ನೆಮ್ಮದಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದ ಜೆ.ಪಿ.ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರಿಗೆ ಒಂದು ಕಡೆ ಬಿಜೆಪಿ ತೊಂದರೆಕೊಡುತ್ತಿದ್ದರೆ ಮತ್ತೊಂದು ಕಡೆ ಮೈತ್ರಿ ಪಕ್ಷ ಕಾಂಗ್ರೆಸ್‍ನಿಂದಲೂ ತೊಂದರೆಯಾಗುತ್ತಿದೆ. ಹೀಗಾಗಿ ಇಕ್ಕಟ್ಟಿನಲ್ಲಿ ಸಿಲುಕಿರುವ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಕಾರ್ಯಕರ್ತರ ಕೆಲಸಗಳನ್ನು ಮಾಡಿಕೊಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಕ್ಷದ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎಂದರು.
ಪಕ್ಷದ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಘಟಕ ಅಧ್ಯಕ್ಷ ಪ್ರಕಾಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದಲ್ಲಿ ಅನ್ನ ನೀಡುವ ರೈತ ಮತ್ತು ಗಡಿಕಾಯುವ ಸೈನಿಕನ ಸ್ಥಿತಿ ಶೋಚನೀಯವಾಗಿದೆ. ಕೇಂದ್ರ ಸರ್ಕಾರ ಇವರತ್ತ ಗಮನ ಹರಿಸುತ್ತಿಲ್ಲ. ರೈತರು ಮತ್ತು ಸೈನಿಕರ ಬಗ್ಗೆ ಚರ್ಚೆ ಮಾಡುವುದನ್ನು ರಫೇಲ್ ಹಗರಣದ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತಿದೆ ಎಂದು ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ