ಭತ್ತ ಕಟಾವಿಗೆ ಮುಂದಾದ ಸಿಎಂ….!!!!

ಮಂಡ್ಯ:

       ಕೆಲ ದಿನಗಳ ಹಿಂದೆಯಷ್ಟೆ  ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

      ಇದೇ ಶುಕ್ರವಾರ ಸಂಜೆ 4ಗಂಟೆ ಸುಮಾರಿಗೆ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ .ಭತ್ತದ ಕಟಾವು ಬಳಿಕ ಸಂಜೆ 5:30ರ ವೇಳೆಗೆ ಇತ್ತೀಚೆಗೆ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳಿಂದ ತಿಳಿದು ಬಂದಿದೆ .

 

       ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆಯಲ್ಲಿ ಭತ್ತ ಕಟಾವು ಮಾಡುವ ಮೂಲಕ ಜಿಲ್ಲೆಯ ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿದು ನಾಟಿ ಮಾಡಿದ್ದರು ಅದೇ ಗದ್ದೆ ಕಯ್ಲಿಗೆ ಬಂದ ಭತ್ತವನ್ನು ಅವರೇ ಕಟಾವು ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link