ರಾಮನಗರ
ಮೈತ್ರಿ ಅಭ್ಯರ್ಥಿ ಸಂಸದ ಡಿಕೆ ಸುರೇಶ್ ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಸಿ ಎಂ ಲಿಂಗಪ್ಪ ಮತ್ತಿತರರು ರಾಮನಗರದ ವಿವಿಧ ಭಾಗಗಳಲ್ಲಿ ಸೋಮವಾರ ಬಹಿರಂಗ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತದಾರರ ಆಶೋತ್ತರಗಳನ್ನು ಈಡೇರಿಸಲು ಸಂಪೂರ್ಣ ವಿಫಲವಾಗಿದ್ದು ಸಾಮಾನ್ಯ ಜನರ ಪರವಾಗಿ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಜನತೆ ಮತ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಇಕ್ಬಾಲ್ ಹುಸೇನ್, ಕೆ.ರಮೇಶ್, ಕೆಎಂಎಫ್ ಅಧ್ಯಕ್ಷ ಪಿ. ನಾಗರಾಜ್ ಸೇರಿದಂತೆ ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








