C.M ಮೆಚ್ಚುಗೆಗೆ ಪಾತ್ರವಾದ ಪೊಲೀಸ್ ಇಲಾಖೆ

ಬೆಂಗಳೂರು

      ರೆಬಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಕಾಪಾಡಿದ ಪೊಲೀಸ್ ಇಲಾಖೆಯು ಮೆಚ್ಚುಗೆಗೆ ಪಾತ್ರವಾಗಿದೆ.

      ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹಾಗೂ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ದರ್ಶನ ಶಾಂತಿಯುತವಾಗಿ ನಡೆದಿದೆ. ಎಲ್ಲಿಯೂ ಅಹಿತಕರ ಘಟನೆ ನಡೆದಿಲ್ಲ.ಕಂಠೀರವ ಸ್ಟುಡಿಯೋದಲ್ಲಿ ಕೂಡ ಅಂತ್ತಕ್ರಿಯೆಯು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಯುತವಾಗಿ ವ್ಯವಸ್ಥಿತವಾಗಿ ನಡೆಸಿದ ಪೊಲೀಸರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿ ಸಚಿವರು ಚಿತ್ರರಂಗದ ಗಣ್ಯರನ್ನು ಪ್ರಶಂಸಿಸಿದ್ದಾರೆ.

       ಪೊಲೀಸ್ ಇಲಾಖೆ ಅತ್ಯುತ್ತಮವಾಗಿ ನಿರ್ವಹಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿರುವ ಕುಮಾರಸ್ವಾಮಿ ಗೃಹ ಇಲಾಖೆಯ ಜವಾಬ್ದಾರಿ ಹೊತ್ತಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಪೆಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

       ಕಳೆದ ಎರಡು ದಿನಗಳಿಂದ ಅಚ್ಚುಕಟ್ಟಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪೆಲೀಸರು ನಿಭಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳು ಬಂದಾಗ ಇದೇ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಎಂದು ಸಿಎಂ ಕುಮಾರಸ್ವಾಮಿ ಸಲಹೆ ಸಹ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap