ಕಲಬುರಗಿ
ಸನ್ಮಾನ್ಯ ಹೆಚ್ ಡಿ ಕುಮಾರಸ್ವಾಮಿ ಅವರ ಗ್ರಾಮವಾಸ್ಥವ್ಯದ ಅಂಗವಾಗಿ ಕಲಬುರಗಿ ಜಿಲ್ಲೆ ಅಫಜಲ್ಪುರ ತಾಲೂಕಿನ ಹೆರೂರ್ ( ಬಿ) ಗ್ರಾಮದಲ್ಲಿ ದಿನಾಂಕ 22-06-2019 ರಂದು ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಅವರು ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆ ಯಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮ, ಭದ್ರತೆ ಇತ್ಯಾದಿ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಂ. ವೈ. ಪಾಟೀಲ್, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್ ಕುಮಾರ, ಜಿಲ್ಲಾ ಪೊಲೀಸ್ ವರಿ಼ಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಟಿನ್ ಮಾರ್ಬನ್ಯಾಂಗ್, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ್ ಸೇರಿದಂತೆ ಮತ್ತಿತರಿದ್ದರು.