ರೋ-ರೋ ರೈಲಿಗೆ ಹಸಿರು ನಿಶಾನೆ

ಬೆಂಗಳುರು

  ನೆಲಮಂಗಲ ರೈಲ್ವೆ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸಲಿರುವ ‘ರೊ-ರೊ ರೈಲು’ (ರೋಲ್ ಆನ್ ರೋಲ್ ಆಫ್ ರೈಲು) ಚೊಚ್ಚಲ ಸೇವೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಹಸಿರು ನಿಶಾನೆ ತೋರಿಸಿದರು.

   ಬಳಿಕ ಮಾತನಾಡಿದ ಅವರು, ಮಾಲಿನ್ಯ ತಡೆಗಟಲು, ದೇಶಕ್ಕೆ ಪರಿಸರ ಸ್ನೇಹಿ ಸಮೂಹ ಸಾರಿಗೆ, ಸಂಚಾರ ಬಹಳ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು. ‘ಬೆಂಗಳೂರಿನಿಂದ ತರಕಾರಿ, ತೆಂಗಿನ ಕಾಯಿ ಅಡಿಕೆ ತೋಟಗಾರಿಕೆ ಉತ್ಪನ್ನಗಳು ಕೈಗಾರಿಕಾ ಉತ್ಪನ್ನಗಳನ್ನು ಸೋಲಾಪುರಕ್ಕೆ ಸಾಗಿಸಲು ಹಾಗೂ ಸೋಲಾಪುರದಿಂದ ಈರುಳ್ಳಿ, ಬೇಳೆ ಕಾಳುಗಳು ಮುಂತಾದ ಸರಕುಗಳನ್ನು ಬೆಂಗಳೂರಿಗೆ ಸಾಗಿಸಲು ಇದರಿಂದ ನೆರವಾಗಲಿದೆ ಎಂದರು.

    ಪ್ರಧಾನಿ ನರೇಂದ್ರ ಮೋದಿ ಅವರು ಆಶಯದಿಂದ ವಿವಿಧ ಸಾರಿಗೆ ವ್ಯವಸ್ಥೆ ಬಲಪಡಿಸಲು ಒಗ್ಗೂಡಿಸಲು ಇದು ನೆರವಾಗಲಿದೆ ಎಂದು ಅವರು ಹೇಳಿದರು.

    ‘ಗೋದಾಮುಗಳಿಂದ ಅಥವಾ ಮಾರುಕಟ್ಟೆಯಿಂದ ಲೋಡ್ ಆದ ಟ್ರಕ್ಗಳು ರೈಲ್ವೆ ನಿಲ್ದಾಣದಲ್ಲಿ ಬಂದು ರೈಲಿನಲ್ಲಿ ಲೋಡ್ ಆಗುತ್ತವೆ. ರೈಲುಗಳ ಮೂಲಕ ಈ ಟ್ರಕ್ಗಳು ಮತ್ತೊಂದು ನಗರಕ್ಕೆ ಬಂದು ಸಾಮಾನು ಸರಂಜಾಮುಗಳೊಂದಿಗೆ ಗೋದಾಮು ಅಥವಾ ಮಾರುಕಟ್ಟೆಗೆ ಹೋಗಿ ಹೊತ್ತು ತಂದ ಸಾಮಾನುಗಳನ್ನು ಅನ್ಲೋಡ್ ಮಾಡಲು ಈ ವ್ಯವಸ್ಥೆಯಿಂದ ಸಹಕಾರಿಯಾಗುತ್ತದೆ. ಒಂದು ರೊ-ರೊ ರೈಲಿನಲ್ಲಿ ಸರಕು ಹಾಗೂ ಟ್ರಕ್ಳೆರಡರ ಭಾರವು ಸೇರಿ 1,260 ಟನ್ ಸರಕು ಸಾಗಿಸಬಹುದಾಗಿದೆ.

     ಈ ವ್ಯವಸ್ಥೆ ಪರಿಸರ ಸ್ನೇಹಿಯಾಗಿದ್ದು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಹಾಗೂ ಟ್ರಕ್ಗಳ ದೀರ್ಘ ಬಾಳಿಕೆಗೆ ಸಹಕಾರಿಯಾಗುತ್ತದೆ’ ಎಂದರು.’ಬೆಂಗಳೂರಿನಿಂದ ತರಕಾರಿ, ತೆಂಗಿನ ಕಾಯಿ ಅಡಿಕೆ ತೋಟಗಾರಿಕೆ ಉತ್ಪನ್ನಗಳು ಕೈಗಾರಿಕಾ ಉತ್ಪನ್ನಗಳನ್ನು ಸೋಲಾಪುರಕ್ಕೆ ಸಾಗಿಸಲು ಹಾಗೂ ಸೋಲಾಪುರದಿಂದ ಈರುಳ್ಳಿ, ಬೇಳೆ ಕಾಳುಗಳು ಮುಂತಾದ ಸರಕುಗಳನ್ನು ಬೆಂಗಳೂರಿಗೆ ಸಾಗಿಸಲು ಇದರಿಂದ ನೆರವಾಗಲಿದೆ ಎಂದರು.

     ನೆಲಮಂಗಲದ ಹತ್ತಿರ ಇರುವ ಎಪಿಎಂಸಿ ಮಾರುಕಟ್ಟೆ, ಪೀಣ್ಯ ಹಾಗೂ ನೆಲಮಂಗಲ ಭಾಗದಲ್ಲಿರುವ ಅನೇಕ ಕೈಗಾರಿಕೆಗಳು ಹಾಗೂ ಸಾರಿಗೆ ಸಂಸ್ಥೆಗಳಿಗೆ ಬಹಳ ಪ್ರಯೋಜನ ವಾಗಲಿದೆ. ಈ ಮೊದಲು ಕೊಂಕಣ್ ರೈಲ್ವೆ ಪ್ರದೇಶದಲ್ಲಿ ಸಂಚರಿಸುತ್ತಿದ್ದ ರೊ-ರೊ ಸೇವೆಯನ್ನು ಬೆಂಗಳೂರು ಮತ್ತು ಸೋಲಾಪುರದ ಮಧ್ಯೆ ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ. ಕಂದಾಯ ಸಚಿವ ಆರ್. ಅಶೋಕ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ ಮೊದಲಾವರು. ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap