ಬೆಂಗಳೂರು
ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಡೆಸಲು ಉದ್ದೇಶಿಸಿರುವ ಉಪಚುನಾವಣೆಗೆ ಅಧಿಸೂಚನೆ ಸೋಮವಾರ ಪ್ರಕಟವಾಗಲಿದೆ.
ನವೆಂಬರ್ 11ರಿಂದ ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು.ನಾಮಪತ್ರ ಸಲ್ಲಿಕೆ ಮಾಡಲು ನವೆಂಬರ್ 18 ಕೊನೆಯ ದಿನವಾಗಿದೆ ಎಂದು ಸಂಜೀವ್ ಕುಮಾರ್ ಅವರು ತಿಳಿಸಿದ್ದಾರೆ.ಒಟ್ಟು 17 ಕ್ಷೇತ್ರಗಳ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ. ಈ ಪೈಕಿ ರಾಜರಾಜೇಶ್ವರಿ ನಗರ, ಮುಸ್ಕಿ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.
ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ನವೆಂಬರ್ 13ರ ಬುಧವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ. ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದೇ?, ಇಲ್ಲವೇ? ಎಂಬುದು ಸದ್ಯದ ಪ್ರಶ್ನೆಯಾಗಿಯೇ ಉಳಿದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ