ಬೆಂಗಳೂರು
ಮುಂಬರುವ 2019ರ ಲೋಕಸಭಾ ಚುನಾವಣೆ ಅತ್ಯಂತ ನಿರ್ಣಾಯಕವಾಗಿದ್ದು, ಪಕ್ಷದ ನಿಧಿಗೆ ಹೆಚ್ಚಿನ ನೆರವು ನೀಡುವಂತೆ ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ಹೊಣೆ ಹೊತ್ತಿರುವ ಕೆ.ಸಿ. ವೇಣುಗೋಪಾಲ್ ಸಚಿವರಿಗೆ ಸಲಹೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತು ನಡೆದ ಸಭೆಯಲ್ಲಿ ಈ ಮನವಿ ಮಾಡಿದ್ದು, ಪ್ರಮುಖವಾಗಿ ಸಚಿವರು ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಬೇಕು ಎಂದು ಸೂಚಿಸಿದ್ದಾರೆ.
ಪಕ್ಷಕ್ಕೆ ನಿಧಿ ಸಂಗ್ರಹಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ಪ್ರಕ್ರಿಯೆಯ ಬಗ್ಗೆ ಆಗಿಂದಾಗ್ಗೆ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಈಗಿನಿಂದಲೇ ನಿಧಿ ಸಂಗ್ರಹ ಮಾಡುವ ಉದ್ದೇಶವನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಎಐಸಿಸಿ ಈಗಾಗಲೇ ಎಲ್ಲಾ ರಾಜ್ಯಗಳಿಗೆ ವೇಳಾ ಪಟ್ಟಿ ನೀಡಿದೆ. ಸಂಗ್ರಹವಾದ ನಿಧಿಯಲ್ಲಿ ಶೇ. 50 ರಷ್ಟು ಎಐಸಿಸಿಗೆ ದೊರೆಯಲಿದ್ದು, ಉಳಿದ ಹಣ ಕೆಪಿಸಿಸಿ ಮತ್ತು ಜಿಲ್ಲಾ ಘಟಕಗಳ ಪಕ್ಷ ಸಂಘಟನೆಗೆ ದೊರೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ