ಡಿ.ಕೆ.ಶಿವಕುಮಾರ್ ವಿರುದ್ಧ ದೂರು

0
16

ಬೆಂಗಳೂರು

      ಸಚಿವ ಡಿ.ಕೆ.ಶಿವಕುಮಾರ್‍ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ

     ಅನಧಿಕೃತ ಜಾಹೀರಾತು ಫಲಕ ಅಳವಡಿಸಿದಕ್ಕಾಗಿ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್ ರಾಜ್ಯ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ.

       ಅನಧಿಕೃತ ಜಾಹೀರಾತು ಫಲಕಗಳನ್ನು ನಿಷೇಧಿಸಿದ್ದ ಹೈಕೋರ್ಟ್, ಬಳಿಕ ನ್ಯಾಯಾಲಯದ ಸೂಚನೆಯಂತೆ ನಗರದಾದ್ಯಂತ ಅನಧಿಕೃತ ಜಾಹೀರಾತು ತೆರವುಗೊಳಿಸಲು ಬಿಬಿಎಂಪಿ ಮುಂದಾಗಿತ್ತು. ಆದರೆ ಮೈಸೂರು ರಸ್ತೆಯ ಪಂತರಪಾಳ್ಯದ ಡಿಕೆಶಿ ಮಾಲೀಕತ್ವದ ಜಾಗದಲ್ಲಿ ಜಾಹೀರಾತು ಫಲಕವನ್ನು ಹಾಕಲಾಗಿತ್ತು. ಹಾಗಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಡಿಕೆಶಿಗೆ ಬಿಬಿಎಂಪಿ ನೋಟಿಸ್ ನೀಡಿತ್ತು. ಆದರೆ ಈ ವಿಷಯವನ್ನು ಡಿಕೆಶಿ ಗಣನೆಗೆ ತೆಗೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿ ಮುತ್ತುರಾಜ್ ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದು ಪ್ರಕರಣ ಅಂತ್ಯವಾಗುವ ಸಾಧ್ಯತೆಗಳಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here