ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು.!

ಬೆಂಗಳೂರು

    ಸಿದ್ದರಾಮಯ್ಯ ಅವರ ವೈಯಕ್ತಿಕ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗುತ್ತಿದೆ. ಪಕ್ಷದಲ್ಲಿ ವ್ಯಕ್ತಿ ನಿಷ್ಠೆಯೇ ಹೆಚ್ಚಾಗುತ್ತಿದೆ. ಮೊದಲು ಇದಕ್ಕೆ ಕಡಿವಾಣ ಹಾಕಿ ಎಂದು ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್‍ಗೆ ದೂರು ನೀಡಿದ್ದಾರೆ.

    ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‍ಗೆ ಜೆಡಿಎಸ್ ಪ್ರಮುಖ ಎದುರಾಳಿ. ಸಿದ್ದರಾಮಯ್ಯ ಮತ್ತು ದೇವೇಗೌಡರ ಕುಟುಂಬದ ನಡುವೆ ವೈಯಕ್ತಿಕ ಹಗೆತನಗಳಿವೆ. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಅಗತ್ಯ ಮೀರಿ ದೇವೇಗೌಡರ ಕುಟುಂಬವನ್ನು ಟೀಕಿಸಿದ್ದರಿಂದಲೇ ಕಾಂಗ್ರೆಸ್‍ಗೆ ಹಾನಿಯಾಯಿತು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಜೆಡಿಎಸ್ ನಾಯಕರುಗಳನ್ನು ಗುರಿಯಾಗಿಸಿಕೊಂಡೆ ರಾಜಕಾರಣ ಮಾಡುತ್ತಿದ್ದರು.

    ಸಮ್ಮಿಶ್ರ ಸರ್ಕಾರ ಪತನದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಮಾಹಿತಿ ಇತ್ತು. ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎಚ್.ವಿಶ್ವನಾಥ್ ವಿರುದ್ಧ ಟೀಕೆ ಮಾಡಿ ಸೌಹಾರ್ದತೆ ಹಾಳಾಗಲು ಸಿದ್ದರಾಮಯ್ಯ ಅವರೆ ಕಾರಣ. ಪ್ರತಿ ಹಂತದಲ್ಲೂ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ಹಿತಾಸಕ್ತಿಗಳು ಚರ್ಚೆಯಾದವೇ ಹೊರತು ಕಾಂಗ್ರೆಸ್‍ನ ಸಂಘಟನೆ ಬಗ್ಗೆ ಹೆಚ್ಚು ಗಮನ ಹರಿಸಲಿಲ್ಲ.

     ಈಗ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನೆ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಕಾಂಗ್ರೆಸ್‍ನ ಕೆಲವು ನಾಯಕರುಗಳು ಸಿದ್ದರಾಮಯ್ಯ ಪರವಾಗಿ ಮiÁತನಾಡಲು ಮುಂದಾದರೆ ಹಳೆ ಮೈಸೂರು ಭಾಗದಲ್ಲಿ ಮತ್ತೆ ರಾಜಕೀಯವಾಗಿ ನಷ್ಟ ಅನುಭವಿಸಬೇಕಾಗುತ್ತದೆ. 15 ತಿಂಗಳುಗಳ ಕಾಲ ಸಮ್ಮಿಶ್ರ ಸರ್ಕಾರ ನಡೆಸಿದ್ದೇವೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಈಗ ಏಕಾಏಕಿ ಪರಸ್ಪರ ಟೀಕೆಗಳನ್ನು ಮಾಡಿಕೊಂಡರೆ ಜನಸಾಮಾನ್ಯರ ದೃಷ್ಟಿಯಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ. ಹಾಗಾಗಿ ಸಿದ್ದರಾಮಯ್ಯ ಅವರ ಮಾತುಗಳಿಗೆ ಬ್ರೇಕ್ ಹಾಕಬೇಕೆಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಹೈಕಮಾಂಡ್‍ಗೆ ದೂರು ನೀಡಿದ್ದಾರೆ.

     ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕನ ಸ್ಥಾನದಲ್ಲಿ ಕೂರಿಸುವ ಮುನ್ನ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಹೈಕಮಾಂಡ್ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಳ್ಳಬಾರದು. ಕಾಂಗ್ರೆಸ್‍ಗೆ ಈಗ ಸಂಕಷ್ಟದ ಕಾಲ. ಸಾಮೂಹಿಕ ನಾಯಕತ್ವವನ್ನೇ ಪಾಲನೆ ಮಾಡಬೇಕು. ಏಕವ್ಯಕ್ತಿ ನಾಯಕತ್ವಕ್ಕೆ ಮಣೆ ಹಾಕಬಾರದು. ಸಿದ್ದರಾಮಯ್ಯ ಅವರೇ ಪ್ರಬಲ ನಾಯಕರೆಂದಾಗಿದ್ದರೆ 2018 ರ ಚುನಾವಣೆಯಲ್ಲಿ ನಾವು ಅಧಿಕಾರ ಕಳೆದುಕೊಳ್ಳುತ್ತಿರಲಿಲ್ಲ.

      ನಾವು ಗೆದ್ದಿದ್ದೆ 80 ಸ್ಥಾನಗಳು. ಕಾಂಗ್ರೆಸ್‍ನ ನೈಜ ಶಕ್ತಿ ಯಾವುದೇ ನಾಯಕತ್ವ ಬರಲಿ, ಹೋಗಲಿ ಶೇ.30 ರಿಂದ 34ರಷ್ಟು ಮಂದಿ ಕಾಂಗ್ರೆಸ್‍ಗೆ ಮತ ಹಾಕುತ್ತಲೇ ಬಂದಿದ್ದಾರೆ. ಕನಿಷ್ಠ 80 ಸ್ಥಾನಗಳನ್ನು ಗೆಲ್ಲುವ ಸಾಮಥ್ರ್ಯ ಕಾಂಗ್ರೆಸ್‍ಗೆ ಇದ್ದೇ ಇದೆ. ಸಿದ್ದರಾಮಯ್ಯ ನಾಯಕತ್ವದಿಂದ ಪಕ್ಷಕ್ಕೆ ಹೆಚ್ಚಿನ ಲಾಭವೇನೂ ಆಗಿಲ್ಲ. ಬದಲಾಗಿ ಅವರ ವೈಯಕ್ತಿಕ ಸಾಮಥ್ರ್ಯ ಮತ್ತು ವರ್ಚಸ್ಸು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಸಾಮೂಹಿಕ ನಾಯಕತ್ವವನ್ನೇ ಪ್ರಧಾನ ಅಸ್ತ್ರವಾಗಿ ಬಳಸಬೇಕೆಂದು ವರಿಷ್ಠರಿಗೆ ಕೆಲವು ಕಾಂಗ್ರೆಸ್ ನಾಯಕರು ಮನವರಿಕೆ ಮಾಡಿಕೊಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap