ದಾವಣಗೆರೆ:
ಇದೇ ಡಿ.16ರಂದು ಬೆಳಗ್ಗೆ 11 ಗಂಟೆಗೆ ನಗರದ ನಾಯಕ ವಿದ್ಯಾರ್ಥಿ ನಿಲಯದಲ್ಲಿ ನೂತನವಾಗಿ ನಿರ್ಮಿಸಿರುವ ವಾಲ್ಮೀಕಿ ಸಾಂಸ್ಕತಿಕ ಸಭಾಭವನದ ಊಟದ ಹಾಲ್, ವಸತಿ ಕೊಠಡಿ, ಅಡುಗೆ ಮನೆ, ಗ್ರಂಥಾಲಯ, ವಾಚನಾಲಯ ಮತ್ತು ಕಂಪ್ಯೂಟರ್ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಹಾಸ್ಟೆಲ್ ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಕೆ.ರಾಮಚಂದ್ರಪ್ಪ ತಿಳಿಸಿದರು.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಸತೀಶ ಜಾರಕಿಹೊಳಿ, ಎಸ್.ವಿ.ರಾಮಚಂದ್ರ, ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಮೇಯರ್ ಶೋಭಾ ಪಲ್ಲಾಗಟ್ಟೆ, ಬೆಂಗಳೂರು ಡಿಸಿಪಿ ರವಿ ಡಿ.ಚನ್ನಣ್ಣನವರ್ ಮತ್ತಿತರರು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.
ಇದೇ ಸಮಾರಂಭದಲ್ಲಿ ಡಾ.ಡಿ.ಆರ್.ವಾಲ್ಮೀಕಿ, ಪಿ.ಆರ್.ಶಾಹು, ಎನ್.ಆ.ಲಿಂಗಸ್ವಾಮಿ, ಪ್ರೊ.ಎ.ಬಿ.ರಾಮಚಂದ್ರಪ್ಪ, ಅಶ್ವಿನಿ ಪ್ರಶಾಂತ್, ಜಿ.ಬಿ.ಉಮೇಶ, ಸಿರಿಗೆರೆ ತಿಪ್ಪೇಶ, ಮಲ್ಲಿಕಾರ್ಜುನ ಕಡಕೋಳ, ಎಂ.ರೇವತಿ ನಾಯಕ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನ ಪಡೆದು, ಸುಮಾರು1 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಟಿ.ದಾಸಕರಿಯಪ್ಪ, ಗೌರವ ಕಾರ್ಯದರ್ಶಿ ಎನ್.ಹೆಚ್.ರಾಮಪ್ಪ, ಸಹ ಕಾರ್ಯದರ್ಶಿ ಎಸ್.ಆರ್.ಇಂದಿರಾ, ಹೆಚ್.ಪರಶುರಾಮ, ಜೆ.ನಾಗರಾಜ, ಆವರಗೆರೆ ವಾಸು ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
