ಬಿಜೆಪಿಗೆ ಹೆಚ್ಚಿನ ಸ್ಥಾನ ಗೆಲ್ಲಲು ಜೆಡಿಎಸ್-ಕಾಂಗ್ರೆಸ್ ಕಾರಣ : ಪ್ರತಾಪ್ ಸಿಂಹ

ಬೆಂಗಳೂರು:

     ಜೆಡಿಎಸ್ ಮಾತ್ರವಲ್ಲ ಕಾಂಗ್ರೆಸ್ ಕಾರ್ಯಕರ್ತರು ಕೂಡ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತ ಈ ಸಲ ಹೆಚ್ಚಿನ ಅಂತರದಲ್ಲಿ ನಾನು ಗೆಲುವು ಸಾಧಿಸಲಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆ ಬೇರೆ ಬೇರೆ ವಿಷಯಗಳ ಆಧಾರದಲ್ಲಿ ನಡೆಯುತ್ತವೆ.

       ಜೆಡಿಎಸ್ ಮತ್ತು ಕಾಂಗ್ರೆಸ್ ಮತದಾರರು ಕೂಡ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎನ್ನುವುದಕ್ಕೆ1998 ರಿಂದ 2014 ರವರೆಗೂ ನಡೆದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿರುವುದೇ ಸಾಕ್ಷಿ. ಈಗಲೂ ಕೂಡ ಅದೇ ವಿಶ್ವಾಸವಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ನಮಗೆ ಮತ ನೀಡಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಈ ಸಲ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದಕ್ಕೂ ಮುನ್ನ ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap