ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ

ಚಿತ್ರದುರ್ಗ:

       ಕಾಂಗ್ರೆಸ್ ಶಾಸಕರುಗಳನ್ನು ಖರೀಧಿಸಿ ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಅಲುಗಾಡಿಸಲು ಹೊರಟಿರುವ ಬಿಜೆಪಿ.ನಾಯಕರುಗಳ ನಡೆಯನ್ನು ವಿರೋಧಿಸಿ ಕಾಂಗ್ರೆಸ್‍ನಿಂದ ಗುರುವಾರ ಬಿಜೆಪಿ.ಕಚೇರಿಗೆ ಮುತ್ತಿಗೆ ಹಾಕಿ ಧಿಕ್ಕಾರಗಳನ್ನು ಕೂಗಲಾಯಿತು.

        ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ.ಕಚೇರಿಗೆ ಮುತ್ತಿಗೆ ಹಾಕಿ ಬಿಜೆಪಿ.ವರಿಷ್ಟರುಗಳ ಕುತಂತ್ರವನ್ನು ಕಟುವಾಗಿ ಖಂಡಿಸಿದರು

     ಕೆ.ಪಿ.ಸಿ.ಸಿ.ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್. ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿರುವುದನ್ನು ಸಹಿಸಲು ಆಗದ ಬಿಜೆಪಿ.ವರಿಷ್ಟರು ಕಾಂಗ್ರೆಸ್ ಶಾಸಕರುಗಳನ್ನು ಖರೀಧಿಸಲು ಕುದುರೆ ವ್ಯಾಪಾರದಲ್ಲಿ ತೊಡಗಿರುವುದು ಅತ್ಯಂತ ಖಂಡನೀಯ. ಸರ್ಕಾರ ಅಲುಗಾಡಿಸಿ ಅನೈತಿಕ ಮಾರ್ಗದಲ್ಲಿ ಅಧಿಕಾರ ಪಡೆಯಲು ಹೊರಟಿರುವ ಬಿಜೆಪಿ.ಗರ ಕನಸು ಫಲಿಸುವುದಿಲ್ಲ. ಇದೆ ರೀತಿ ಕುತಂತ್ರ ಮುಂದುವೆಸಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

         ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಉಪಾಧ್ಯಕ್ಷ ಅಜ್ಜಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್,  ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್. ಸೇವಾದಳದ ಜಿಲ್ಲಾಧ್ಯಕ್ಷ ಮಹಮದ್ ಅಶ್ರಫ್‍ಆಲಿ. ಡಿ.ಎಸ್.ಸೈಯದ್‍ವಲಿಖಾದ್ರಿ, ಎ.ಪಿ.ಎಂ.ಸಿ.ಉಪಾಧ್ಯಕ್ಷ ಜಯಪ್ಪ, ಪ್ರೊಫೆಷನಲ್ ಸೆಲ್ ವಿಭಾಗದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ನಾಗರಾಜ್ ಜಾನ್ಹವಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಹಸನ್‍ತಾಹೀರ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link